ನಾಳೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ

 

ಏ.23ರಂದು ದೈಹಿಕ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.22:
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಇದೇ ಏಪ್ರಿಲ್ 23ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಅನುದಾನದಡಿ ಚಿತ್ರದುರ್ಗ ತಾಲ್ಲೂಕಿನ ಪ್ರತ್ಯಕ್ಷ ಹಾಗೂ ಪರೋಕ್ಷ ಗಣಿಬಾದಿತ ಪ್ರದೇಶದ ದೈಹಿಕ ವಿಕಲಚೇತನರಿಗೆ 50 ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಿದ್ದಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours