ನ.27ರಂದು ಚಿಗುರು ಕಾರ್ಯಕ್ರಮ.

 

ಚಿತ್ರದುರ್ಗ, ನವೆಂಬರ್26:
ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 27ರಂದು ಬೆಳಿಗ್ಗೆ 10.30ಕ್ಕೆ ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಕೀರ್ಣದಲ್ಲಿ “ಚಿಗುರು” ಪ್ರತಿಭಾವಂತ ಮಕ್ಕಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಿ.ಮಮತಾ ಕಾರ್ಯಕ್ರಮ ಉದ್ಘಾಟಿಸುವರು. ದೇವರಕೊಟ್ಟ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವಿ ಪ್ರಕಾಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅವಿನ್ ಆರ್, ಹಿರಿಯೂರು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಸುಗಮ ಸಂಗೀತ, ಸಮೂಹ ನೃತ್ಯ, ಜಾನಪದ ಗೀತೆ, ಏಕಪಾತ್ರಾಭಿನಯ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ  ಇಲಾಖೆ  ಸಹಾಯಕ  ಧನಂಜಯ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours