ಪರಿಶಿಷ್ಟ ಜಾತಿ, ಅಲೆಮಾರಿ ಜನಾಂಗದವರಿಗೆ ಆಹಾರಧಾನ್ಯಗಳ ಕಿಟ್ ವಿತರಣೆ: ಸಚಿವ ಬಿ.ಶ್ರೀರಾಮುಲು

 

ಚಿತ್ರದುರ್ಗ,ಜೂನ್23:
ನಗರದ ಸರ್ಕಾರಿ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಬುಧವಾರ ಪರಿಶಿಷ್ಟ ಜಾತಿ  ಹಾಗೂ ಅಲೆಮಾರಿ ಜನಾಂಗದವರಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು 85 ಮಂದಿ ಪರಿಶಿಷ್ಟ ಜಾತಿ ಹಾಗೂ ಅಲೆಮಾರಿ ಜನಾಂಗದವರಿಗೆ ಆಹಾರಧಾನ್ಯಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಖನಿಜ ನಿಗದ ಅಧ್ಯಕ್ಷ ಲಿಂಗಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಅಲೆಮಾರಿ ಜನಾಂಗದವರಿಗೆ ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಆಹಾರಧಾನ್ಯಗಳ ಕಿಟ್ ವಿತರಿಸಿದರು.

[t4b-ticker]

You May Also Like

More From Author

+ There are no comments

Add yours