ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ದೇಹಕ್ಕೆ ಎರಡು ಕಣ್ಣುಗಳಿದ್ದಂತೆ: ಸಚಿವ ಬಿ.ಶ್ರೀರಾಮುಲು.

 

ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಚಾಲನೆ
ಮೊಳಕಾಲ್ಮುರು: ರೂ.20ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
**
ಚಿತ್ರದುರ್ಗ,ಅಕ್ಟೋಬರ್11:
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 2021-22ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಅನುದಾನದಡಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ.20ಕೋಟಿ ವೆಚ್ಚದ ಸಿ.ಸಿ.ರಸ್ತೆ, ಚರಂಡಿ ತಡೆಗೋಡೆ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಿಗೆ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಭೂಮಿಪೂಜೆ ನೆರವೇರಿಸಿದರು.
ಮೊಳಕಾಲ್ಮುರು ತಾಲ್ಲೂಕಿನ ರಾಯಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ರೇನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ (ಎಸ್‍ಸಿಪಿ) ರೂ.10ಕೋಟಿ ಅನುದಾನದಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಗಳಲ್ಲಿ ಸಿ.ಸಿ.ರಸ್ತೆ, ಚರಂಡಿ ತಡೆಗೋಡೆ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಒಟ್ಟು 73 ಕಾಮಗಾರಿಗಳು ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ (ಟಿಎಸ್‍ಪಿ) ರೂ.10ಕೋಟಿ ಅನುದಾನದಲ್ಲಿ ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಸಿ.ಸಿ.ರಸ್ತೆ, ಚರಂಡಿ ತಡೆಗೋಡೆ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಒಟ್ಟು 59 ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು, ಮೊಳಕಾಲ್ಮರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 44ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರೂ.20ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಈ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿದ್ದಾರೆ. ಈ ಜನರ ಅಭಿವೃದ್ಧಿಗಾಗಿ ಕ್ಷೇತ್ರವ್ಯಾಪ್ತಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು ದೇಹಕ್ಕೆ ಎರಡು ಕಣ್ಣುಗಳಿದ್ದಂತೆ. ಈ ಸಮುದಾಯಗಳು ಮೂಲಭೂತಸೌಕರ್ಯಗಳನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಮೊಳಕಾಲ್ಮುರು ತಾಲ್ಲೂಕಿನ 78 ಕೆರೆಗಳಿಗೆ ನೀರು ತುಂಬಿಸಲು ರೂ.618ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ನನ್ನ ಅಧಿಕಾರದ ಅವಧಿಯಲ್ಲಿಯೇ ಕೆರೆಗಳಿಗೆ ನೀರು ತುಂಬಿಸುವ ಕೆಲಸ ನಡೆಯಲಿದೆ. ಇದರ ಜೊತೆಗೆ ತುಂಗಾಭದ್ರಾ ಹಿನ್ನೀರಿನ ಎಲ್ಲ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಸುಮಾರು 20 ಕಿ.ಮೀ ಅರಣ್ಯ ಭೂಮಿ ಬಾಕಿ ಇದ್ದು, ತಕರಾರು ನಡೆಯುತ್ತಿದೆ ಹಾಗೂ ತುಂಗಾಭದ್ರಾ ನದಿಯಲ್ಲಿ ಜಾಕ್‍ವೆಲ್ ಕಾಮಗಾರಿ ಬಾಕಿ ಇದೆ. ಆದಷ್ಟು ಶೀಘ್ರದಲ್ಲಿ ಈ ಎಲ್ಲ ಅಡೆತಡೆಗಳನ್ನು ನಿವಾರಿಸಿ ಮೊಳಕಾಲ್ಮುರು ತಾಲ್ಲೂಕಿನ ಎಲ್ಲ ಗ್ರಾಮಗಳಿಗೂ ತುಂಗಾಭದ್ರಾ ಹಿನ್ನೀರಿನಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪರಿಶಿಷ್ಟ ವರ್ಗದ ಜನರ ಆರ್ಥಿಕ, ಸಾಮಾಜಿಕ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದ್ದಾರೆ. ಪರಿಶಿಷ್ಟ ವರ್ಗದ ಜನರ ಶೈಕ್ಷಣಿಕ ಅಭಿವೃದ್ಧಿಯಾಗಿ ವಸತಿಶಾಲೆ ಹಾಗೂ ವಸತಿನಿಲಯಗಳನ್ನು ಸ್ಥಾಪಿಸಲಾಗುತ್ತಿದೆ. ಇದರ ಜೊತೆಗೆ ಸಮುದಾಯದ ಬಹುಮುಖ್ಯ ಬೇಡಿಕೆಯಾದ ಪರಿಶಿಷ್ಟ ವರ್ಗದ ಜನಾಂಗಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.7.5ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾದ ಮಾಲತಿ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ನಿರ್ದೇಶಕರಾದ ದಯಾನಂದ, ಮೊಳಕಾಲ್ಮುರು ತಹಶೀಲ್ದಾರ್ ಸುರೇಶ್, ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಾನಕಿರಾಮ್, ರಾಯಾಪುರ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಮುಖಂಡರಾದ ಜಯಪಾಲಯ್ಯ, ಮಂಜುನಾಥ್, ರಾಮರೆಡ್ಡಿ, ರಾಮದಾಸ್, ಪರಮೇಶ್ವರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ವಿವರ: ಮೊಳಕಾಲ್ಮುರು ತಾಲ್ಲೂಕಿನ ರಾಯಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ರೇನಹಳ್ಳಿ ಗ್ರಾಮದಲ್ಲಿ ಸೋಮವಾರ ರೂ.20ಕೋಟಿ ವೆಚ್ಚದ ಸಿ.ಸಿ.ರಸ್ತೆ, ಚರಂಡಿ ತಡೆಗೋಡೆ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಭೂಮಿಪೂಜೆ ನೆರವೇರಿಸಿದರು.
====

[t4b-ticker]

You May Also Like

More From Author

+ There are no comments

Add yours