ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಡಾ.ಸಿ.ಎಲ್.ಫಾಲಾಕ್ಷ

 

 

 

 

ಚಿತ್ರದುರ್ಗ,ಜೂನ್05:
 ಪರಿಸರ ಸಂರಕ್ಷಣೆಯ ಸಂಪೂರ್ಣ ಜವಾಬ್ದಾರಿ ನಮ್ಮೆಲ್ಲರದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಹೇಳಿದರು.
 ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಂಪಿಗೆ, ನೇರಳೆ ಗಿಡಗಳನ್ನು ನೆಟ್ಟು ಅವರು ಮಾತನಾಡಿದರು.
 ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಯು ನೆಟ್ಟ ಗಿಡಗಳನ್ನು ನೀರುಣಿಸಿ ಬೆಳೆಸುವ ಕಾರ್ಯವನ್ನು ಪರಿಸರ ದಿನಕ್ಕೆ ಮಾತ್ರ ಸೀಮಿತವಾಗದಂತೆ ಪ್ರತಿ ನಿತ್ಯವೂ ಗಿಡಗಳ ಆರೈಕೆ ಪೋಷಣೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶಿ ಮಾತನಾಡಿ, ಪರಿಸರ ವ್ಯವಸ್ಥೆಯ ಪುನಃಸ್ಥಾಪನೆಯಾಗಿ ಸ್ವಚ್ಛ ಪರಿಸರದಲ್ಲಿ ಆರೋಗ್ಯವಂತ ಜೀವನ ನಡೆಸಿ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಗಿಡಮರಗಳನ್ನು ಬೆಳೆಸಿ, ಉಸಿರು ಉಳಿಸಿ ಎಂದು ಘೋಷಣೆಯನ್ನು ಸಿಬ್ಬಂದಿಗಳಿಂದ  ಕೂಗಿಸಿ ಆಂತರಿಕ ಪರಿಸರ ಸ್ವಚ್ಛತೆ ಬಳಸಿದ ಮಾಸ್ಕ್‍ಗಳನ್ನು ಎಲ್ಲೆಂದರಲ್ಲಿ ಬಿಸಾಕದೆ ಸರಿಯಾದ ಸ್ಥಳದಲ್ಲಿ ವಿಲೇವಾರಿ ಮಾಡುವುದು, ಕೆಮ್ಮುವಾಗ, ಸೀನುವಾಗ ಎಚ್ಚರವಹಿಸುವುದು ಆರೋಗ್ಯಕರ ಅಭ್ಯಾಸಗಳು ನಮ್ಮದಾಗಬೇಕು ಎಂದರು.
 ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ಅಸ್ಲಾಮ್ ಸಾಬ್, ಕೀಟಶಾಸ್ತ್ರಜ್ಞೆ ನಂದಿನಿಕಡಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಹನುಮಂತಗೌಡ ಪೂಜಾರ್, ಬಿ.ಮೂಗಪ್ಪ, ಜಾನಕಿ ಹಾಗೂಕಚೇರಿಯ ಎಲ್ಲ ಸಿಬ್ಬಂದಿಯವರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours