ಪಿ.ಎಂ ಕಿಸಾನ್ ಯೋಜನೆ: 11ನೇ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ ಇಲ್ಲದಿದ್ದರೆ ಹಣ ಜಮಾ ಆಗಲ್ಲ.

 

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ 12:
ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನೀಡಲಾಗುವ ರೂ.2,000/- ನಗದು ಹಣದ 11ನೇ ಕಂತು ಶೀಘ್ರವೇ ರೈತರ ಖಾತೆಗೆ ತಲುಪಲಿದೆ. ಈಗಾಗಲೇ 2,000/-ದಂತೆ 10 ಕಂತುಗಳಲ್ಲಿ ಅರ್ಹ ರೈತರು ಹಣವನ್ನು ಪಡೆದಿದ್ದಾರೆ. ಈ ಯೋಜನೆಯಡಿ ರೈತರು ವಾರ್ಷಿಕ ರೂ.6,000/- ಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದಂತೆ ನೇರವಾಗಿ ಅವರ ಖಾತೆಗೆ ಜಮೆಯಾಗುತ್ತಿದೆ.
ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. ತಪ್ಪದೇ ಮೇ 31ರೊಳಗೆ ಫಲಾನುಭವಿ ರೈತರು ಇ-ಕೆವೈಸಿಯನ್ನು ಮಾಡಿಸಬೇಕು.
ಫಲಾನುಭವಿಗಳು pmkisan.gov.in  ವೆಬ್‍ಸೈಟ್‍ಗೆ ಭೇಟಿ ನೀಡಿ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ “ಒಟಿಪಿ”ಯನ್ನು  ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹದು.  ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ “ಒಟಿಪಿ” ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours