ಫೆ.6 ರಿಂದ ತೇರುಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ: ಸರಳ ಆಚರಣೆಗೆ ತೀರ್ಮಾನ

 

 

 

 

ಚಿತ್ರದುರ್ಗ,ಜನವರಿ31:
ಜಿಲ್ಲೆಯ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವ ಫೆಬ್ರವರಿ 06 ರಿಂದ 22 ರವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಆದೇಶದಂತೆ ಕೊರೊನಾ  ವೈರಾಣು ಸ್ಫೋಟ ಮತ್ತು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಸರಳ, ಸಾಂಕೇತಿಕ ಹಾಗೂ ಸಂಪ್ರಾದಾಯಿಕವಾಗಿ ದೇವಾಲಯದ ಪ್ರಕಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಜಾತ್ರಾ ಮಹೋತ್ಸವು ಫೆಬ್ರವರಿ 6ರಂದು ಕಂಕಣಧಾರಣೆಯೊಂದಿಗೆ ಪ್ರಾರಂಭವಾಗಿ, ಫೆ.17ರಂದು ಬ್ರಹ್ಮರಥೋತ್ಸವ, 19ರಂದು ಕರ್ಪೂರದ ಆರತಿ, 21ರಂದು ಕಂಕಣ ವಿಸರ್ಜನೆ ಧಾರ್ಮಿಕ ಕಾರ್ಯಕ್ರಮಗಳು ಮುಕ್ತಾಯವಾಗಲಿದೆ.
ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹಿರಿಯೂರು ತಹಶೀಲ್ದಾರ್ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours