ಬಸವೇಶ್ವರ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರ

 

ಹಿರಿಯೂರು: ತಾಲೂಕಿನ  ಗುಹಿಲ್ಯಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮತ್ತು ಮೇಟಿಕುರ್ಕೆ ಗ್ರಾಮ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ  ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಯಾದ ಡಾಕ್ಟರ್ ಆರ್. ರಂಗನಾಥ್ ಅವರು ಮಾತನಾಡಿ ಅಂಧರ ಬಾಳಿಗೆ ಬೆಳಕು ನೀಡುವ ಉದ್ದೇಶದಿಂದ ಮತ್ತು ಯಾರಿಗೆ ಕಣ್ಣಿನ ತೊಂದರೆ ಇದೆಯೊ ಅವರಿಗೆ ಉಚಿತ ಶಸ್ತ್ರಚಿಕಿತ್ಸೆ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತವಾಗಿ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಹಿಂದಿನ ದಿನಗಳಲ್ಲಿ ಬೆಂಗಳೂರು. ದಾವಣಗೆರೆ. ಶಿವಮೊಗ್ಗ.ಕೆ ಜಿಲ್ಲೆಗೆ ಹೋಗಬೇಕಾದ ಅನಿವಾರ್ಯ ಇತ್ತು ಆದರೆ ಈಗ ನಮ್ಮ ಜಿಲ್ಲೆಯಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಸಾರ್ವಜನಿಕರು ಇದನ್ನು ಉಪಯೋಗಿಸಿಕೊಳ್ಳಬೇಕೆಂದು ಹೇಳಿದರು. ಇದೇ ಸಂದರ್ಭದಲ್ಲಿ ವೈದ್ಯಾಧಿಕಾರಿ ರಂಜಿತಾ ಬೆಳಗೆರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾಕ್ಟರ್ ಆರ್. ರಂಗನಾಥ್ . ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ್. ನಟರಾಜ. ವಿನಯ್. ಡಿ.ಎಲ್.ಒ. ಕಂಬಾಳಿಮಠ. ಆರೋಗ್ಯ ನಿರೀಕ್ಷಣ ಅಧಿಕಾರಿ ಮಹೇಂದ್ರ. ತಿಪ್ಪೇಶ್. ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾಂತೇಶ್. ಮುತ್ತಮ್ಮ. ವಿಜಯಲಕ್ಷ್ಮಿ. ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.

[t4b-ticker]

You May Also Like

More From Author

+ There are no comments

Add yours