ಬಾಲ್ಯ ವಿವಾಹ ತಡೆ, ಮಕ್ಕಳ ರಕ್ಷಣೆ ಜಾಗೃತಿ ರಥಕ್ಕೆ ಜಿಲ್ಲಾ ಪಂಚಾಯಿತಿ ಸಿಇಓ. ಡಾ.ಕೆ.ನಂದಿನಿದೇವಿ ಚಾಲನೆ

 

ಚಿತ್ರದುರ್ಗ,ಜುಲೈ30:
ಬಾಲ್ಯವಿವಾಹ ತಡೆಗಟ್ಟಲು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಬಾಲ್ಯವಿವಾಹದಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಹಾಗೂ ಮಕ್ಕಳ ರಕ್ಷಣೆ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಜಾಗೃತಿ ರಥಕ್ಕೆ ಜಿಲ್ಲಾ ಪಂಚಾಯಿತಿ  ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ ಚಾಲನೆ ನೀಡಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದೊಂದಿಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಬಾಲ್ಯವಿವಾಹ ತಡೆ ಮತ್ತು ಮಕ್ಕಳ ರಕ್ಷಣೆ ವಿಷಯ ಕುರಿತು ಜಾಗೃತಿ ಮೂಡಿಸುವ ಜಾಗೃತಿ ರಥಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.
ಜಾಗೃತಿ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿ ದೇವಿ, ಕೋವಿಡ್-19 ಸಂದರ್ಭದಲ್ಲಿ ಬಾಲ್ಯವಿವಾಹ ಪ್ರಕರಣಗಳು ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ  ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದರಿAದ ಇದನ್ನು ತೆಡೆಗಟ್ಟುವುದು ಅಧಿಕಾರಿಗಳು ಮತ್ತು ಜನ ಸಮುದಾಯದ  ಜವಾಬ್ದಾರಿಯಾಗಿರುತ್ತದೆ. ಈ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಿಸಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗನಾಥ್,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಸ್. ರಾಜಾನಾಯ್ಕ್,   ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ. ಆರ್. ಪ್ರಭಾಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ವರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್. ಸುಧಾ, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours