ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿದೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

 

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್‌ಗೌಡ ಅವರ ಚುನಾವಣಾ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು

ದೊಡ್ಡಬಳ್ಳಾಪುರ: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಆರು ಸ್ಥಾನ ಗೆಲ್ಲಲೇ ಬೇಕಾದ ಸವಾಲಿದೆ. ಮುಂದಿನ ವಿಧಾನಸಭೆ ಚುನಾವಣೆ ಜೆಡಿಎಸ್ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ನಗರದ ಒಕ್ಕಲಿಗರ ಭವನದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ಅಭ್ಯರ್ಥಿ ಎಚ್.ಎಂ.ರಮೇಶ್‌ಗೌಡ ಅವರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.

2018ರಿಂದ ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರ ರಚನೆಯಾಗಿಲ್ಲ. ಹೀಗಾಗಿ ಮೈತ್ರಿ ಸರ್ಕಾರ ರಚಿಸುವ ಅನಿವಾರ್ಯತೆ ಸೃಷ್ಟಿಯಾಗಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತದ ಬಗ್ಗೆ ಜನರಿಗೆ ಅಸಮಾಧಾನವಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ 120 ಕ್ಷೇತ್ರಗಳನ್ನು ಗೆಲ್ಲುವುದು ಪಕ್ಷದ ಗುರಿಯಾಗಿದೆ ಎಂದರು.

[t4b-ticker]

You May Also Like

More From Author

+ There are no comments

Add yours