ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ: ಡಿಕೆಶಿ

 

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ದೇಶಾದ್ಯಂತ ರೈತರು ಪ್ರತಿಭಟನೆ ನಡೆಸಿದರೂ, ಸಂಸತ್ ಹಾಗೂ ಶಾಸನಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ಬದುಕಲು ಬಿಡುತ್ತಿಲ್ಲ. ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲ. ಬೆಂಬಲ ಬೆಲೆ ಇಲ್ಲ. ಸಾಲ ಮಾಡಿ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಂಡವಾಳಶಾಹಿಗಳಿಗೆ ಕೃಷಿ ಭೂಮಿ ಹಾಗೂ ರೈತರ ಬದುಕನ್ನು ಧಾರೆ ಎರೆಯುವ ಮೂಲಕ ರೈತರನ್ನು ಮತ್ತಷ್ಟು ಘಾಸಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕೃಷಿ ಕಾಯ್ದೆಗಳ ಬಗ್ಗೆ ದೇಶಾಧ್ಯಂತ ವಿರೋಧವಿದ್ದರೂ ಸರ್ಕಾರ ಹಠಮಾರಿತನ ಧೋರಣೆ ಅನುಸರಿಸುತ್ತಿದೆ. ಇದು ನಿಲ್ಲಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಸ್ವ ಇಚ್ಚೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ. ಅರ್ಜಿ ಹಾಕಿಕೊಂಡು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಆಶ್ವಾಸನೆಗೆ ಮಾತ್ರ ಸೀಮಿತವಾಗಿದೆ. ಅಸಂಘಟಿತ ಕಾರ್ಮಿಕರಿಗೆ ಪರಿಹಾರ ಧನ ನೀಡಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಗುರುತಿನ ಚೀಟಿ ಮಾಡಿಸಿ ಕೊಡಬೆಕು. ಒಂದು ಕ್ಷೇತ್ರದಲ್ಲಿ ಕನಿಷ್ಠ 50 ಸಾವಿರ ಗುರುತಿನ ಚೀಟಿ ಮಾಡಿಸಬೇಕು ಎಂದು ತಿಳಿಸಿದರು.

[t4b-ticker]

You May Also Like

More From Author

+ There are no comments

Add yours