ಮಂಗಳವಾರದ ಹೆಲ್ತ್ ಬುಲೆಟಿನ್ ಒಟ್ಟು ಇಲ್ಲಿಯವರೆಗೂ 179 ಸಾವು ಇಂದು ಕೋವಿಡ್ ದೃಢವೆಷ್ಟು ನೋಡಿ.

 

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 44 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35,005ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 13, ಚಳ್ಳಕೆರೆ 13, ಹಿರಿಯೂರು 3, ಹೊಳಲ್ಕೆರೆ 9, ಹೊಸದುರ್ಗ 3, ಮೊಳಕಾಲ್ಮುರು ತಾಲ್ಲೂಕಿನ 3 ಪ್ರಕರಣಗಳು ಸೇರಿದಂತೆ ಒಟ್ಟು 45 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 103 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 3447 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 44 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 35,005ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 179 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 33,988 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 838 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 473368 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,67,125 ಜನರ ಮಾದರಿ ಸಂಗ್ರಹಿಸಲಾಗಿದ್ದು, 5,30,239 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1015 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours