ಮಕ್ಕಳಿಗೆ ಲಸಿಕೆ ಪಡೆದು ಕೋವಿಡ್‌ನಿಂದ ರಕ್ಷಣೆ ಪಡೆಯಿರಿ: ಜಿ.ಪಂ. ಸಿಇಒ ಡಾ.ಕೆ.ನಂದಿನಿದೇವಿ

 

ಚಿತ್ರದುರ್ಗ,
ಮಾರ್ಚ್ ೧೬:
೧೨-೧೪ ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹ ಮಕ್ಕಳು ತಪ್ಪದೇ ಲಸಿಕೆ ಪಡೆದು ಕೋವಿಡ್‌ನಿಂದ ರಕ್ಷಣೆ ಪಡೆಯಿರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಹೇಳಿದರು.

ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ೧೨ ರಿಂದ ೧೪ ವರ್ಷದೊಳಗಿನ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಅಭಿಯಾನ ಮತ್ತು ೬೦ ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಕ್ಕಳು ಭಯ ಪಡುವ ಅವಶ್ಯಕತೆಯಿಲ್ಲ.
ಧೈರ್ಯವಾಗಿ ಕೊರೊನಾ ಲಸಿಕೆಹಾಕಿಸಿಕೊಳ್ಳಿ. ಕ್ಷೇತ್ರ
ಶಿಕ್ಷಣಾಧಿಕಾರಿಗಳು ಮಕ್ಕಳಿಗೆ ಧೈರ್ಯ ತುಂಬುವುದರ
ಮೂಲಕ ಲಸಿಕೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಎಂದು
ಹೇಳಿದರು.
ಇಂದಿನಿಂದ ೧೨ ವರ್ಷದಿಂದ ೧೪ ವರ್ಷದವರಿಗೆ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಲಸಿಕೆ ಹಾಕಿಸಿಕೊಂಡ ಬಳಿಕ
ಮಕ್ಕಳಿಗೆ ಪ್ಯಾರಸಿಟಮಲ್ ಮಾತ್ರೆ ನೀಡಲಾಗುತ್ತದೆ. ಸ್ವಲ್ಪ
ಹೊತ್ತು ಸುಸ್ತಾಗುತ್ತದೆ ಮಾತ್ರೆ ತೆಗೆದುಕೊಂಡ ಬಳಿಕ
ಸರಿ ಹೋಗುತ್ತದೆ. ಯಾರು ಗಾಬರಿಯಾಗಬೇಡಿ ಎಂದು
ಮಕ್ಕಳಿಗೆ ಧೈರ್ಯ ತುಂಬಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ.ಆರ್.ರಂಗನಾಥ್ ಮಾತನಾಡಿ. ಹಂತ ಹಂತವಾಗಿ ಎಲ್ಲ
ವಯೋಮಾನದವರಿಗೆ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ
ನೀಡಲಾಗುತ್ತಿದೆ. ಇಂದಿನಿAದ ೧೨ರಿಂದ ೧೪ ವರ್ಷದ
ವಯೋಮಾನದ ಎಲ್ಲಾ ಮಕ್ಕಳಿಗೆ ಕೋವಿಡ್ ಲಸಿಕೆ
ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲ ಪೂರ್ವ ಸಿದ್ಧತೆ
ಮಾಡಿಕೊಂಡು ಲಸಿಕೆ ಹಾಕಲಾಗುತ್ತಿದೆ ಎಂದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ಮಾತನಾಡಿ. ಜಿಲ್ಲೆಯಲ್ಲಿ ಕೋವಿಡ್ ಮೊದಲ ಅಲೆ, ಎರಡನೇ ಅಲೆಯಲ್ಲಿ ೧೮ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯಲ್ಲಿ ಶೇ.೧೦೦ರಷ್ಟು ಪ್ರಗತಿ ಸಾಧಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಇಂದಿನಿಂದ ೧೨ರಿಂದ ೧೪ ವರ್ಷದ ವಯೋಮಾನದ ಎಲ್ಲಾ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಜಿಲ್ಲೆಯಾದ್ಯಂತ ಒಟ್ಟು ೭೫,೨೫೯ಮಕ್ಕಳನ್ನು ಗುರುತಿಸಿ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಬಸವರಾಜ್, ನಿವಾಸಿ ವೈದ್ಯಾಧಿಕಾರಿ ಡಾ.ಆನಂದ್ ಪ್ರಕಾಶ್, ಜಿಲ್ಲಾ ಕುಟುಂಬ ಕಲ್ಯಾಣ ಯೋಜನಾ ಅಧಿಕಾರಿ ಡಾ, ರೇಣುಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್, ಕ್ಷೇತ್ರ ಶಿಕ್ಷಣ ಅಧಿಕಾರಿ  ಬಸವರಾಜಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್,
ಉಪ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಗೌರಮ್ಮ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ
ಸಂರ್ಪಕಾಧಿಕಾರಿ ಇನಾಯತ್, ಪರ್ವಿನ್, ಗಂಗಾಧರ್,
ರುದ್ರಮುನಿ, ಸೌಭಾಗ್ಯಮ್ಮ, ಶಾಂತಮ್ಮ, ಆರೋಗ್ಯ ನಿರೀಕ್ಷಣ
ಅಧಿಕಾರಿಗಳು ಮತ್ತು ಆರೋಗ್ಯ ಸುರಕ್ಷಾ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours