ಮನೆ ಮನೆ ಭೇಟಿ, ಅಂತರ್ ವೈಯಕ್ತಿಕ ಸಮಾಲೋಚನೆ ಮೂಲಕ ವಿಶೇಷ ಲಸಿಕಾ ಅಭಿಯಾನ: ಡಿಸಿ ಕವಿತಾ ಎಸ್.ಮನ್ನಿಕೇರಿ.

 

 

 

 

ಮನೆ ಮನೆ ಭೇಟಿ, ಅಂತರ್ ವೈಯಕ್ತಿಕ ಸಮಾಲೋಚನೆ ಮೂಲಕ ವಿಶೇಷ ಲಸಿಕಾ ಅಭಿಯಾನ
******
ಚಿತ್ರದುರ್ಗ,ಆಗಸ್ಟ್27:
ಹಿರಿಯೂರು ತಾಲ್ಲೂಕು ಕೂನಿಕೆರೆ ಗ್ರಾಮದಲ್ಲಿ ಶೇ.80ರಷ್ಟು ಜನರು ಕೋವಿಡ್ ಲಸಿಕೆ ಪಡೆಯಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಮನೆ ಮನೆಗೆ ಭೇಟಿ ನೀಡಿ ಅಂತರ್ ವೈಯಕ್ತಿಕ ಸಮಾಲೋಚನೆ ನಡೆಸುವ ಮೂಲಕ ಜನರ ಸಮಸ್ಯೆ ಆಲಿಸಿ, ಸಲಹೆ ಸೂಚನೆ ನೀಡುತ್ತಾ ಕೋವಿಡ್ ಲಸಿಕೆ ಹಾಕಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿóಶೇಷ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ ಮಾತನಾಡಿ, ಕೋವಿಡ್-19 ಲಸಿಕೆ ಸಂಪೂರ್ಣ  ಸುರಕ್ಷಿತವಾಗಿದೆ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಈಗಾಗಲೇ ಬಹಳಷ್ಟು ಜನರು ಲಸಿಕೆ ಪಡೆದಿದ್ದಾರೆ. ನಿಮ್ಮ ಮತ್ತು ನಿಮ್ಮ ಕುಟುಂಬದ ಸುರಕ್ಷತೆಗಾಗಿ ಲಸಿಕೆ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಗ್ರಾಮ ನಿಗಾವಣೆ ತಂಡದ ಸದಸ್ಯರು, ಎ.ವಿ.ಕೊಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours