ರಾಜ್ಯದಲ್ಲಿ ಒಂದೇ ದಿನದಲ್ಲಿ ಕೋವಿಡ್ ನಿಂದ 115 ಸಾವು, ಬೆಂಗಳೂರು ಬಾರಿ ಇಳಿಕೆ.

 

ಬೆಂಗಳೂರು, ಮೇ 16.ಕೋವಿಡ್  ಸಾಂಕ್ರಾಮಿಕ ಪಿಡುಗಿನಿಂದ ನಲುಗಿ ಹೋಗಿದ್ದ  ಕರ್ನಾಟಕದಲ್ಲಿ ಪರಿಸ್ಥಿತಿ ಮತ್ತೆ ಯಾಥ ಸ್ಥಿತಿಗೆ ಮರಳುತ್ತಿದೆ. ಭಾರತದ ಅಂಕಿ-ಅಂಶಗಳ ಲೆಕ್ಕಚಾರ  ಜೊತೆಗೆ ರಾಜ್ಯದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಇಳಿಕೆ ಕಂಡಿದೆ.‌

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5041 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 115 ಮಂದಿ ಮೃತಪಟ್ಟಿದ್ದು, ಇದೇ ಅವಧಿಯಲ್ಲಿ 14,785 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳರಿನಲ್ಲಿ  ಕೊವಿಡ್ ದಾಖಲೆಯ ಇಳಿಕೆ.

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ಮೊದಲ ಬಾರಿಗೆ 1,000ಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿವೆ. ಒಂದು ದಿನದಲ್ಲಿ 985 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,99,143ಕ್ಕೆ ಏರಿಕೆಯಾಗಿದೆ. 16 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,335ಕ್ಕೆ ಏರಿಕೆ ಕಂಡಿದೆ.

[t4b-ticker]

You May Also Like

More From Author

+ There are no comments

Add yours