ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಪೋಹ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

 

ನವದೆಹಲಿ:  ರಾಜ್ಯದಲ್ಲಿ  ಯಾವುದೇ ತೊಡಕುಗಳು ಆಗದಂತೆ  ಕಾರ್ಯ ನಿರ್ವಹಣೆ ಮಾಡುತ್ತಿರುವ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ  ಬದಲಾವಣೆ ಮಾಡುವ  ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟ ನುಡಿಗಳಿವು.

ನಗರದ  ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮದವರೊಂದಿಗೆ  ಮಾತನಾಡಿ ಕೋವಿಡ್‌–19 ಅಂತಹ  ಸಂದಿಗ್ಧ ಪರಿಸ್ಥಿತಿಯನ್ನು ಸಮರ್ಥವಾಗಿ  ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ರಾಜ್ಯದಲ್ಲಿ  ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ ಎದುರು ಯಾವುದೇ ಚರ್ಚೆಗಳಾಗಿಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.

‘ಪಕ್ಷವು ಎಲ್ಲಾ ರಾಜ್ಯಗಳಲ್ಲಿರುವ ಕಾರ್ಯಕರ್ತರು, ಮುಖಂಡರು ಸೇರಿದಂತೆ ಪ್ರತಿಯೊಬ್ಬರಿಗೂ ಮಾರ್ಗದರ್ಶನ ನೀಡುತ್ತದೆ. ಅದೇ ರೀತಿ, ಪಕ್ಷದ ಹೈಕಮಾಂಡ್‌ ಮೇಲೂ ಪ್ರತಿಯೊಬ್ಬ ನಾಯಕರಿಗೆ ವಿಶ್ವಾಸ ಇರುತ್ತದೆ. ಯಡಿಯೂರಪ್ಪ ಅವರೂ ಹೈಕಮಾಂಡ್‌ ಮಾರ್ಗದರ್ಶನದ ಮೇರೆಗೆ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪಿಲ್ಲ ಎಂದರು.

‘ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ಧ್ವನಿ ಎತ್ತಿದ್ದರು. ಆದರೆ ಇನ್ನು  ಕೆಲವು ಶಾಸಕರು ಅವರ ಪರ ಸಹಿ ಸಂಗ್ರಹ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾನು ಜೂನ್‌ 16 ಅಥವಾ 17ರಿಂದ ಮೂರು ದಿನಗಳ ಕಾಲ ನಾನು ಕರ್ನಾಟಕ ಪ್ರವಾಸದಲ್ಲಿರುತ್ತೇನೆ. ಎಲ್ಲಾರ ಸಮಸ್ಯೆಗಳನ್ನು  ಆಲಿಸುತ್ತೇನೆ. ಮಾತುಕತೆ ಮೂಲಕ ಗೊಂದಲ ನಿವಾರಿಸುತ್ತೇನೆ’ ಎಂದು ಅವರು ಸ್ಪಷ್ಟನೆ ನೀಡಿದರು.

ಸಾರ್ವಜನಿಕ ಬದುಕಿನಲ್ಲಿ ಇರುವ  ಶಾಸಕರು ಬಹಿರಂಗವಾಗಿ ಯಾವುದೇ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ ಎಂದರು. ಈಗಾಗಲೇ  ಬಹಿರಂಗ ಹೇಳಿಕೆ ನೀಡಿದವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ತಿಳಿಸಿದರು.

ಶಾಸಕರು ತಮ್ಮ ಕ್ಷೇತ್ರದ  ಜನರ ಸೇವೆ ಮಾಡಬೇಕು. ರಾಜ್ಯಕ್ಕೆ ಒಳ್ಳೆಯದಾಗುವುದನ್ನು ಯೋಚಿಸಬೇಕು. ಈ ನಿಟ್ಟಿನಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು.

ಕರ್ನಾಟಕ ರಾಜ್ಯದಲ್ಲಿ  ‘ರಾಜ್ಯ ಘಟಕದ ಅಧ್ಯಕ್ಷರ  ಬದಲಿಸುವ ಬಗ್ಗೆ ಚರ್ಚೆ ನಡೆದಿದೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಉತ್ತಮ  ಸಂಘಟನೆ ಮೂಲಕ‌ ಕಾರ್ಯದಲ್ಲಿ  ತೊಡಗಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಮತ್ತು ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ತರಲಾಗುತ್ತದೆ ಎಂಬುದು ಕೇವಲ ವದಂತಿ ಮತ್ತು ಊಹೆ ಎಂದು ಅವರು ಹೇಳಿದರು.

[t4b-ticker]

You May Also Like

More From Author

+ There are no comments

Add yours