ರೈತರಿಗೆ ಗುಡ್ ನ್ಯೂಸ್ : ಹನಿ ನೀರಾವರಿಗೆ 90% ಸಬ್ಸಿಡಿ

 

ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳುವ ಎಲ್ಲ ವರ್ಗದ ರೈತರಿಗೂ ಹಿಂದಿನಂತೆಯೇ ಶೇ 90ರಷ್ಟು ಸಹಾಯಧನ ಕೊಡಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಆದೇಶ ಹೊರಬೀಳಲಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಭರವಸೆ ನೀಡಿದರು.

ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದ ಗುಡ್ಡದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖಂಡರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದ ಸಹಾಯಧನವನ್ನು ಎಲ್ಲ ವರ್ಗದ ರೈತರಿಗೂ ಕೊಡಲಾಗುತ್ತಿರಲಿಲ್ಲ. ಇದರಿಂದ ರೈತರಿಗೆ ತೊಂದರೆ  ಆಗಿತ್ತು. ಇದನ್ನು ಗಮನಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದೇನೆ. ಹನಿ ನೀರಾವರಿಗೆ ಶೇ 90ರಷ್ಟು ಸಹಾಯಧನವನ್ನು (2 ಎಕರೆವರೆಗೂ) ಕೊಡಲಾಗುವುದು. ವಿಧಾನಪರಿಷತ್ ಚುನಾವಣೆ ನೀತಿಸಂಹಿತೆ ಇರುವುದರಿಂದ  ಆದೇಶ ಹೊರಬಿದ್ದಿಲ್ಲ’ ಎಂದು ಹೇಳಿದರು.

[t4b-ticker]

You May Also Like

More From Author

+ There are no comments

Add yours