ರೈತರಿಗೆ ಬೆಳೆ ವಿಮೆ, ಬೆಳೆ ಪರಿಹಾರ ನೀಡದೆ ಸರ್ಕಾರ ಹಾಗೂ ವಿಮಾ ಕಂಪನಿಗಳು ವಂಚನೆ: ರೈತ ಸಂಘ ಆರೋಪ

 

 

 

 

ಚಳ್ಳಕೆರೆ-17 ತಾಲ್ಲೂಕಿನ ಹಲವಾರು ರೈತರಿಗೆ ಬೆಳೆ ವಿಮೆ, ಬೆಳೆ ಪರಿಹಾರ ನೀಡದೆ ಸರ್ಕಾರ ಹಾಗೂ ವಿಮಾ ಕಂಪನಿಗಳು ವಂಚನೆ ಮಾಡುತ್ತಿವೆಯೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಆರೋಪಿಸಿದರು.
ಅವರು, ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹ ನೇತೃತ್ವವಹಿಸಿ ಮಾತನಾಡಿದರು.
ರೈತರು ಕುಟುಂಬದ ಕಷ್ಟಗಳನ್ನು ಬದಿಗಿಟ್ಟು ಬೆಳೆ ವಿಮೆ ಕಟ್ಟಿದ್ದಾರೆ ಆದರೆ ವಿಮಾ ಕಂಪನಿಗಳು ಬೆಳೆ ವಿಮೆ ನೀಡುವಲ್ಲಿ ವಿಳಂಬ ಧೋರಣೆ ತೋರುತ್ತಿವೆ. ಈ ಬಗ್ಗೆ ಹಲವಾರು ಬಾರಿ ತಾಲ್ಲೂಕು ಆಡಳಿತ, ಜಿಲ್ಲಾಡಳಿತಕ್ಕೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ನೂರಾರು ರೈತರು ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೃಷಿ ಜಂಟಿ ನಿರ್ದೇಶಕರಾದ ರಮೇಶ್ ಕುಮಾರ್ ಮಾಹಿತಿ ನೀಡಿ, ಈಗಾಗಲೇ ತಾಲ್ಲೂಕಿ ಸುಮಾರು 32.5 ಕೋಟಿ ರೂಪಾಯಿ ರೈತರ ಖಾತೆಗೆ ಜಮಾವಾಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆ ಪರಿಹಾರ ಪಡೆದ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬೆಳೆ ವಿಮೆ ಕೂಡ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಚ್ಚು ಬರುವ ನಿರೀಕ್ಷೆಯಲ್ಲಿದೆ. ಇನ್ನು ಕೆಲವೇ ದಿನಗಳಲ್ಲಿ ಬೆಳೆ ವಿಮೆ ಕೂಡ ಎಲ್ಲರ ಖಾತೆಗೆ ಜಮಾ ವಾಗಲಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ರೈತರಾದ ಎರಿಸ್ವಾಮಿ ದೊಡ್ಡ ಉಳ್ಳಾರ್ತಿ ಕರಿಯಣ್ಣ ತಿಪ್ಪೇಸ್ವಾಮಿ ಗೋವಿಂದಪ್ಪ, ತೋಟಗಾರಿಕೆ ಅಧಿಕಾರಿ ವಿರುಪಾಕ್ಷಪ್ಪ ಕೃಷಿ ಅಧಿಕಾರಿ ಅಶೋಕ್ ತಹಸಿಲ್ದಾರ್ ಸಂಧ್ಯಾ ಮುಂತಾದವರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours