ರೈತರ ಹೋರಟಕ್ಕೆ ಮಣಿದ ಕೇಂದ್ರ ಸರ್ಕಾರ 3 ಕೃಷಿ ಕಾಯ್ದೆ ರದ್ದು

 

ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿದ ರೈತ ಸಂಘಟನೆಗಳು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ಕೈಗೊಂಡು ನವೆಂಬರ್ 26ಕ್ಕೆ ಒಂದು ವರ್ಷ ಪೂರೈಸುವ ಮೊದಲೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ.

ಹಲವಾರು ರಾಜ್ಯಗಳಲ್ಲಿ ರೈತರು ಕೈಗೊಂಡ ಬೃಹತ್ ಪ್ರತಿಭಟನೆಗೆ ಮಣಿಸಿದಿರುವ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಗುರುನಾನಕ್ ಜಯಂತಿಯಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ “ನಾವು ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಒದಗಿಸಲು ಮತ್ತು ಸಣ್ಣ ನೀರಾವರಿ ರೈತರಿಗೆ 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್ ಗಳಂತಹ ಸೌಲಭ್ಯವನ್ನು ಒದಗಿಸಿದ್ದೇವೆ. ಇದು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಆದಾಗ್ಯೂ, ಹೊಸ ಕಾನೂನುಗಳ ಪ್ರಯೋಜನವನ್ನು ರೈತರಿಗೆ ಅರ್ಥಮಾಡಿಸಲು ನಾವು ವಿಫಲರಾಗಿದ್ದೇವೆ. ಆದ್ದರಿಂದ ನಾವು ಅವುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದರು.

[t4b-ticker]

You May Also Like

More From Author

+ There are no comments

Add yours