ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ,ಜುಲೈ27:
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು 2021ರ ಅಕ್ಟೋಬರ್ 01 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಸಾಂಸ್ಥಿಕ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಹಿರಿಯ ನಾಗರಿಕರಿಂದ, ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಕಚೇರಿಯಿಂದ ಅರ್ಜಿ ನಮೂನೆಗಳನ್ನು ಆಗಸ್ಟ್ 21 ರೊಳಗಾಗಿ  ಅರ್ಜಿ ನಮೂನೆಯಲ್ಲಿ ಪೂರ್ಣ ವಿವರಗಳನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ ಆವರಣ ಚಿತ್ರದುರ್ಗ ಈ ಕಚೇರಿಗೆ ಸಲ್ಲಿಸಬೇಕು. ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-235284/86ಗೆ ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours