ವಾರ್ತಾ ಇಲಾಖೆ ಹೆಚ್.ತಿಪ್ಪಯ್ಯಗೆ ಬೀಳ್ಕೊಡುಗೆ

 

ಚಿತ್ರದುರ್ಗ,ಜುಲೈ31:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿನಿ ಚಾಲಕರಾದ ಹೆಚ್.ತಿಪ್ಪಯ್ಯ ಅವರು ಶನಿವಾರ ವಯೋನಿವೃತ್ತಿ ಹೊಂದಿದ್ದು, ಆದ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಆತ್ಮೀಯವಾಗಿ ಬೀಳ್ಕೋಡುಗೆ ನೀಡಲಾಯಿತು.
ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತರಾದ ಜಿ.ಎಸ್.ಉಜ್ಜಿನಪ್ಪ, ಸಿನಿ ಚಾಲಕ ಹೆಚ್.ತಿಪ್ಪಯ್ಯ ಅವರು ತಮ್ಮ ಸೇವಾ ಅವಧಿಯಲ್ಲಿ ನೆಮ್ಮದಿಯಿಂದ ಸೇವೆ ಸಲ್ಲಿಸಿ ನೆಮ್ಮದಿಯಿಂದ ನಿವೃತ್ತಿ ಹೊಂದಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಕಚೇರಿಯಲ್ಲಿ ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ ಎಂದು ತಿಳಿಸಿದ ಅವರು ತಿಪ್ಪಯ್ಯ ಅವರ ಮುಂದಿನ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಆಶಯ ವ್ಯಕ್ತಪಡಿಸಿದರು.
ಹಿರಿಯ ಪತ್ರಕರ್ತರಾದ ಟಿ.ಕೆ.ಬಸವರಾಜ್ ಮಾತನಾಡಿ ಹೆಚ್. ತಿಪ್ಪಯ್ಯ ಅವರು ತಮ್ಮ ಕೆಲಸದ ದಿನಗಳಲ್ಲಿ ಒಂದು ಕಪ್ಪು ಚುಕ್ಕೆ ಬಾರದಂತೆ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ ಎಂದರು.
ಪತ್ರಕರ್ತರಾದ ಮಂಜುನಾಥ್ ಮಾತನಾಡಿ, ತಿಪ್ಪಯ್ಯ ಅವರು ವಾರ್ತಾ ಇಲಾಖೆ ಕಚೇರಿಯಲ್ಲಿ ಅಜಾತ ಶತ್ರುವಾಗಿ ಕೆಲಸ ಮಾಡಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರೊಂದಿಗೆ ಉತ್ತಮ ಒಡನಾಡ ಹೊಂದಿದ್ದರು ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಧನಂಜಯ, ಸಿನಿ ಚಾಲಕರಾದ ಹೆಚ್.ತಿಪ್ಪಯ್ಯ ಅವರು ಇಲಾಖೆಯಲ್ಲಿ 38 ವರ್ಷ 6 ತಿಂಗಳು 14 ದಿನಗಳ ಕಾಲ ಸುಧೀರ್ಘವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮುಂದಿನ ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಶುಭಹಾರೈಸಿದರು.
ಇದೇ ವೇಳೆ ಜಿಲ್ಲಾ ಖಜಾನೆಯ ಚಂದ್ರಕುಮಾರ್, ಪತ್ರಕರ್ತರಾದ ಶ್ರೀನಿವಾಸ್ ತಮ್ಮ ಅನುಭವ ಹಂಚಿಕೊಂಡರು.
ಸಮಾರಂಭದಲ್ಲಿ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಸಣ್ಣ ನೀರಾವರಿ ಇಲಾಖೆಯ ರವಿಶಂಕರ್, ನಾಗರಾಜ್, ಎಸ್‍ಪಿ ಕಚೇರಿಯ ಅನಿತಾ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಹಾಗೂ ಪತ್ರಕರ್ತರು ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours