ಚಿತ್ರದುರ್ಗ,ಜನವರಿ04:
2021-22ನೇ ಸಾಲಿ£ಗೆ ಅಲ್ಪ ಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು) ಎನ್ಎಸ್ಪಿ ಫೋರ್ಟಲ್ನಲ್ಲಿ ಪ್ರಥಮ ಪಿಯುಸಿಯಿಂದ ಪಿಹೆಚ್ಡಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಮತ್ತು ತಾಂತ್ರಿಕ, ವೃತ್ತಿಪರ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೆರಿಟ್ –ಕಂ- ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆನ್ಲೈನ್ನಲ್ಲಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ.
ಆನ್ಲೈನ್ ವಿಳಾಸ https://dom.karnataka.gov.in ಅಥವಾ https://scholarships.gov.in ಮೆಟ್ರಿಕ್ ನಂತರದ ಮತ್ತು ಮೆರಿಟ್ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳನ್ನು ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಓದುತ್ತಿರುವ ಕಾಲೇಜಿಗೆ ಸಲ್ಲಿಸಲು ಸೂಚಿಸಿದೆ.
ಎನ್ಎಸ್ಪಿ ಫೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎಸ್ಎಸ್ಪಿ ಫೋರ್ಟಲ್ನಲ್ಲಿಯೂ ಸಹ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
[t4b-ticker]
+ There are no comments
Add yours