ಶೈಕ್ಷಣಿಕ ಶುಲ್ಕ ಮರುಪಾವತಿ : ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ,ಆಗಸ್ಟ್19:
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್14 ಕೊನೆಯ ದಿನವಾಗಿದೆ.
2021-22ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 14ರೊಳಗಾಗಿ ಕಚೇರಿಗೆ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours