ಸಮಾಜದ ನಿರ್ಮಾತೃ ಶಿಕ್ಷಕ. ಶಿಕ್ಷಣದಿಂದ ಮಾತ್ರ ನಮ್ಮ‌ ಅಭಿವೃದ್ಧಿ: ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ-07 ಸಮಾಜದ ನಿರ್ಮಾತೃ ಶಿಕ್ಷಕ. ಶಿಕ್ಷಣದಿಂದ ಮಾತ್ರ ನಮ್ಮ‌ ಅಭಿವೃದ್ಧಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಗುರು ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತಿ, ಚಳ್ಳಕೆರೆ ತಾಲೂಕು ಪಂಚಾಯತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಮಾಜಕ್ಕೆ‌ಶಿಕ್ಷಕರ ಅಗತ್ಯತೆಯನ್ನು ಗುರುತು ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಉಪ ನಿರ್ದೇಶಕ ರವಿಶಂಕರ್ ರೆಡ್ಡಿ, ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಸುರೇಶ್ , ನಗರಸಭಾ ಅಧ್ಯಕ್ಷೆ ಸುಮಕ್ಕ ಅಂಜನಪ್ಪ, ಉಪಾಧ್ಯಕ್ಷೆ ಮಂಜುಳಾ ಪ್ರಸನ್ನಕುಮಾರ , ನಗರಸಭಾ ಸದಸ್ಯ ರಮೇಶ್ ಗೌಡ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಾರುತೇಶ್, ತಾಲೂಕು ಅಧ್ಯಕ್ಷ ವೀರಣ್ಣ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours