ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

 

 

 

ಚಿತ್ರದುರ್ಗ, ಡಿಸೆಂಬರ್ 10: ಎನ್
ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಅನುಷ್ಠಾನಕ್ಕೆ ಪ್ರವರ್ಗ-2ಎರಲ್ಲಿ ಬರುವ ಸವಿತಾ ಮತ್ತು ಇದರ ಉಪಜಾತಿಗೆ ಸೇರಿದ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಸವಿತಾ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್ http://kssd.karnataka.gov.in ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours