ಸಹಾಯಕ ಆರೋಗ್ಯ ಸಿಬ್ಬಂದಿ ತರಬೇತಿ ಅರ್ಜಿ ಆಹ್ವಾನ

 

ಚಿತ್ರದುರ್ಗ,ಜೂನ್05:
ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಮಹಾಮಾರಿಯ ಪ್ರಭಾವವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೌಶಾಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು ಪ್ರಧಾನಮಂತ್ರಿ ಕೌಶಲ್ಯಾ ವಿಕಾಸ 3.0 ಯೋಜನೆಯಡಿಯಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಸಿಬ್ಬಂದಿಗೆ ಒಂದು ತಿಂಗಳ ತರಬೇತಿ ನೀಡಿ, ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 07 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪಿಯುಸಿ-ವಿಜ್ಞಾನ ಕೋರ್ಸ್ ಮುಗಿಸಿದವರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್-ಬೇಸಿಕ್, ಫಿಲೆಬೊಟಾಮಿಸ್ಟ್, ಎಸ್‍ಎಸ್‍ಎಲ್‍ಸಿ ಓದಿದವರಿಗೆ ಜನರಲ್ ಡ್ಯೂಟಿ ಅಸಿಸ್ಟಂಟ್, ಹೋಂ ಹೆಲ್ತ್ ಏಡ್,ಮೆಡಿಕಲ್ ರೆಕಾರ್ಡ್ ಅಸಿಸ್ಟಂಟ್, ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ ಓದಿದವರಿಗೆ ಮೆಡಿಕಲ್ ಎಕ್ವಿಪ್‍ಮೆಂಟ್ ಟೆಕ್ನಾಲಜಿ ಅಸಿಸ್ಟಂಟ್ ಕೋರ್ಸ್‍ಗಳಿಗೆ ಆಹ್ವಾನಿಸಲಾಗಿದ್ದು, ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು http://forms.gle.U6UC8BodiocVYoxQ9 ಲಿಂಕ್ ಮೂಲಕ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234050, ರವಿ, ಸಹಾಯಕ ನಿರ್ದೇಶಕರು, ಮೊಬೈಲ್ ಸಂಖ್ಯೆ 9901273756, ವೇವಣ್ಣ, ಸಹಾಯಕ ಸಾಂಖ್ಯಿಕ ಅಧಿಕಾರಿ, ಮೊಬೈಲ್ ಸಂಖ್ಯೆ 9972604772 ಮತ್ತು ಅತೀಕ್ ರೆಹಮಾನ್, ಅಭಿಯಾನ ವ್ಯವಸ್ಥಾಪಕರು, ಮೊಬೈಲ್ ಸಂಖ್ಯೆ 8970933486 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಿ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours