ಸೆಕ್ಯೂರಿಟಿ ಹುದ್ದೆಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ,ಅಕ್ಟೋಬರ್11:
ಬೆಂಗಳೂರು ಭಾರತೀಯ ಸ್ಟೇಟ್ ಬ್ಯಾಂಕ್ ಇವರು ಸೆಕ್ಯೂರಿಟಿ ಹುದ್ದೆಗಳಿಗಾಗಿ ಮಾಜಿ ಸೈನಿಕರಿಂದ (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದೆ.
ಆಸಕ್ತರು ಮಾಹಿತಿಯನ್ನು ಭರ್ತಿಮಾಡಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours