ಸೆ.17ರಂದು ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ವಾಹನಗಳ ಮಾರ್ಗ ಬದಲಾವಣೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆಪ್ಟೆಂಬರ್15:
ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾ ಗಣಪತಿಯ ಪ್ರತಿμÁ್ಠಪನಾ ಸಮಿತಿ ವತಿಯಿಂದ ಪ್ರತಿμÁ್ಠಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಯನ್ನು ಸೆಪ್ಟಂಬರ್17 ರಂದು ಹಮ್ಮಿಕೊಳ್ಳಲಾಗಿದೆ.
ಗಣಪತಿ ವಿಸರ್ಜನಾ ಮೆರವಣಿಗೆಯು ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿ ಸಂಚರಿಸಿ, ಹೊಳಲ್ಕೆರೆ ರಸ್ತೆಯ ಮುಖಾಂತರ ಚಂದ್ರವಳ್ಳಿ ಬಳಿಯ ವಿಸರ್ಜನಾ ಸ್ಥಳ ತಲುಪುತ್ತದೆ.
ಗಣಪತಿ ವಿಗ್ರಹದ ವಿಸರ್ಜನಾ ಮೆರವಣಿಗೆಯಲ್ಲಿ ಸುಮಾರು ಒಂದು ಲಕ್ಷಕ್ಕಿಂತ ಅಧಿಕ ಜನರು ಭಾಗವಹಿಸುವುದರಿಂದ, ಸಂಚಾರ ಸುವ್ಯವಸ್ಥೆ ಕಾಯ್ದುಕೊಂಡು ಹೋಗುವ ಸಲುವಾಗಿ ಚಿತ್ರದುರ್ಗದೊಳಗೆ ಪ್ರವೇಶಿಸುವ ವಾಹನಗಳು ಈ ಕೆಳಕಂಡಂತೆ ಬದಲಿ ಮಾರ್ಗದಲ್ಲಿ ಸಂಚರಿಸುವ ಬಗ್ಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ.
ಬದಲಿ ಮಾರ್ಗ: ಬೆಂಗಳೂರು ಹಾಗೂ ಚಳ್ಳಕೆರೆ ಮತ್ತು ಹೊಸಪೇಟೆ ಮಾರ್ಗದಿಂದ ಬರುವ ವಾಹನಗಳು ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆ ಮುಖಾಂತರ ಬಂದು ಮೆದೇಹಳ್ಳಿ ರಸ್ತೆ ಮತ್ತು ಎ.ಪಿ.ಎಂ.ಸಿ. ಮಾರುಕಟ್ಟೆ ಮುಖಾಂತರ ಬಸ್ ನಿಲ್ದಾಣಗಳಿಗೆ ಬಂದು ಪುನಃ ಅದೇ ಮಾರ್ಗದಲ್ಲಿ ಹೊರಹೋಗುವುದು.
ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಜೆ.ಎಂ.ಐ.ಟಿ, ವೃತ್ತದ ಮುಖಾಂತರವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬಂದು ಪುನಃ ವಾಪಾಸು ಅದೇ ಮಾರ್ಗದಲ್ಲಿ ಸಂಚರಿಸುವುದು.
ಶಿವಮೊಗ್ಗ, ಹೊಳಲ್ಕೆರೆ, ಭೀಮಸಮುದ್ರ ಮಾರ್ಗದಿಂದ ಬರುವ ವಾಹನಗಳು ರಾಷ್ಟ್ರೀಯ ಹೆದ್ದಾರಿ 13ರ ಬೈಪಾಸ್‍ನಲ್ಲಿ ಮುರುಘಾ ಮಠದವರೆಗೆ ಹೋಗಿ ನಂತರ ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆ ಮುಖಾಂತರ ಕೆ.ಎಸ್.ಆರ್.ಟಿ. ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ಪುನಃ ವಾಪಾಸು ಅದೇ ಮಾರ್ಗದಲ್ಲಿ ಸಂಚರಿಸುವುದು.
ಹಿಂದೂ ಮಹಾಗಣಪತಿ ವಿಸರ್ಜನೆಯಲ್ಲಿ ಭಾಗವಹಿಸುವವರು ಚಳ್ಳಕೆರೆ ಮೂಲಕ ಮುರುಘಾರಾಜೇಂದ್ರ ಕ್ರೀಡಾಂಗಣ, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ

[t4b-ticker]

You May Also Like

More From Author

+ There are no comments

Add yours