ಸ್ವಯಂ ಉದ್ಯೋಗಕ್ಕಾಗಿ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ

 

 

 

 

ಚಿತ್ರದುರ್ಗ (ಕರ್ನಾಟಕವಾರ್ತೆ) ಏ.12:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಚಿತ್ರದುರ್ಗ ಜಿಲ್ಲೆಯ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಏಪ್ರಿಲ್ ತಿಂಗಳ ನಾಲ್ಕನೇ ವಾರದಲ್ಲಿ ಒಂದು ದಿನದ ‘ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ.
ಸ್ವಂತ ಉದ್ಯಮವನ್ನು ಸ್ಥಾಪಿಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕನಿಷ್ಠ 18 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು ಬರೆಯಲು ಬರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಏಪ್ರಿಲ್ 26ರೊಳಗೆ 2 ಪಾಸ್‍ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜಂಟಿ ನಿರ್ದೇಜಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಜೋಗಿಮಟ್ಟಿ ರಸ್ತೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 7760270058,  ತರಬೇತುದಾರ ಪಿ.ವಿಜಯಕುಮಾರ ಅವರನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours