ಸ್ವಲ್ಪ ರಾಂಗ್ ಆದ ಕೋವಿಡ್, ಜಿಲ್ಲೆಯಲ್ಲಿ ಸ್ವಲ್ಪ‌ ಸೋಂಕು ಹೆಚ್ಚಳ, ಇಂದು ಒಬ್ಬರು ಕೋವಿಡ್ ಸೋಂಕಿಗೆ ಬಲಿ.

 

ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 195 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,902ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 31, ಚಳ್ಳಕೆರೆ 43, ಹಿರಿಯೂರು 22, ಹೊಳಲ್ಕೆರೆ 24, ಹೊಸದುರ್ಗ 51, ಮೊಳಕಾಲ್ಮುರು ತಾಲ್ಲೂಕಿನ 24 ಪ್ರಕರಣಗಳು ಸೇರಿದಂತೆ ಒಟ್ಟು 195 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 858 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 1928 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 195 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 33,902ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 166 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 30,542 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 3,194 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 439477 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 5,21,947 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,86,742 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 449 ಜನರ ವರದಿ ಬರುವುದು ಬಾಕಿ ಇದೆ. 854 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours