ಸ್ವಾತಂತ್ರೋತ್ಸವ ಆಚರಣೆಗೆ ಸಿದ್ಧತೆ: ಡಿ.ಸಿ ಕವಿತಾ ಎಸ್ ಮನ್ನಿಕೇರಿ

 

ಚಿತ್ರದುರ್ಗ,ಜುಲೈ29:
ಆಗಸ್ಟ್-15  ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಪೊಲೀಸ್ ಕವಾಯತ್ತು ಮೈದಾನದಲ್ಲಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ತಿಳಿಸಿದ ಅವರು  ಕೊವೀಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸ್ವಾತಂತ್ರ್ಯದಿನಾಚರಣೆಯನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್, ಆಗ್ನಿಶಾಮಕ, ಅಬಕಾರಿ, ಅರಣ್ಯ  ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ. ಕೋವಿಡ್ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಂದ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ. ಕಾರ್ಯಕ್ರಮದಲ್ಲಿ ಸುರಕ್ಷತೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆಯಾಗಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಕುರಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಲ್ಯವಿವಾಹ ನಿಷೇಧ ಕುರಿತು ಕಾನೂನು ಕ್ರಮಗಳು ಮತ್ತು ಬಾಲ್ಯವಿವಾಹದಿಂದಾಗುವ ಮಕ್ಕಳ ಆರೋಗ್ಯ ಸ್ಥಿತಿಯ ಪರಿಣಾಮ ಕುರಿತು ಕಿರು ನಾಟಕ ಪ್ರದರ್ಶನದ ಮೂಲಕ ಜಾಗೃತಿಮೂಡಿಸುವ ಕಾರ್ಯಕ್ರಮ ಆಯೋಜಿಸಲು ತಿಳಿಸಿದರು.
ಕೊರೋನಾ ವಾರಿಯರ್ರ್‍ಗಳಿಗೆ ಸನ್ಮಾನ: ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ರ್‍ಗಳನ್ನು ಉತ್ತೇಜಿಸಲು ಪೌರ ಕಾರ್ಮಿಕ, ಆಗ್ನಿಶಾಮಕ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ, ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿ ಗಳನ್ನು  ಸನ್ಮಾನಿಸಲು ತೀರ್ಮಾನ ಕೈಗೊಳ್ಳಲಾಯಿತು.
ಸ್ವಾತಂತ್ರ್ಯ ಹೋರಾಟಗಾರರಿಗೆ ಈ ವೇಳೆ ಸನ್ಮಾನಿಸಿ ಗೌರವಿಸಲಾಗುತ್ತಿದ್ದು ಕೋವಿಡ್ ಕಾರಣದಿಂದ ಯೋಧರ ಮನೆಗಳಿಗೆ ಹೋಗಿ ಸನ್ಮಾನ ಮಾಡಲು ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ,   ಡಿವೈಎಸ್‍ಪಿ ಪಾಂಡುರಂಗ, ಉಪವಿಭಾಗಾಧಿಕಾರಿ  ಆರ್. ಚಂದ್ರಯ್ಯ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದರ

[t4b-ticker]

You May Also Like

More From Author

+ There are no comments

Add yours