ಚಿತ್ರದುರ್ಗ,ಆಗಸ್ಟ್13:
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ 15 ರಂದು ಜಿಲ್ಲಾ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳು ಬೆಳಿಗ್ಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ಮಾಡಲಿರುವುದರಿಂದ ಕಚೇರಿ ಸಂಕೀರ್ಣದಲ್ಲಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಬೆಳಿಗ್ಗೆ 7.30 ಗಂಟೆಗಿಂತ ಮುಂಚಿತವಾಗಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿರುವ ಧ್ವಜಸ್ತಂಭದ ಬಳಿ ಸಮಾವೇಶಗೊಳ್ಳಲು ತಿಳಿಸಿದೆ.
ಸ್ವಾತಂತ್ರ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು. ಕೋವಿಡ್-19ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳವುದು ಕಡ್ಡಾಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
[t4b-ticker]
+ There are no comments
Add yours