ಹಿಂಗಾರು ಹಂಗಾಮು ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ: ಬೆಳೆ ಮಾಹಿತಿ ಆಪ್‍ಲೋಡ್ ಮಾಡಲು ಸೂಚನೆ

 

ಚಿತ್ರದುರ್ಗ, ಡಿಸೆಂಬರ್13:
ಚಿತ್ರದುರ್ಗ ಜಿಲ್ಲೆಯಲ್ಲಿ 2021-22ನೇ ಸಾಲಿನ ಹಿಂಗಾರು ಹಂಗಾಮು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‍ನಿಂದ Farmer Rabi Crop Survey Karnataka-2021-22 ಎಂದು ಹುಡುಕಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿ ಹಾಗೂ ಛಾಯಾಚಿತ್ರವನ್ನು ಅಪ್‍ಲೋಡ್ ಮಾಡಬಹುದಾಗಿದೆ.
ಈ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಪಹಣಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಅಥವಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಸಹ ಬೆಳೆ ಮಾಹಿತಿಯನ್ನು ದಾಖಲಿಸಬಹುದು. ಬೆಳೆ ವಿವರಗಳನ್ನು ದಾಖಲು ಮಾಡದಿದ್ದಲ್ಲಿ ಇಲಾಖೆಗಳಿಂದ ದೊರೆಯುವ ಸವಲತ್ತುಗಳಿಂದ ವಂಚಿತರಾಗುತ್ತೀರಿ.
ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 8448447715 ಗೆ ಕರೆಮಾಡಬಹುದು ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತಸಂಪರ್ಕ ಕೇಂದ್ರ ಅಥವಾ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿಕೃಷಿನಿರ್ದೇಶಕರಾದ ಡಾ.ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours