ಹಿಜಾಬ್-ಕೇಸರಿ ಗಲಾಟೆ ತಾರಕಕ್ಕೆ , ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಸಿಎಂ ಬಸವರಾಜ್ ಬೊಮ್ಮಾಯಿ

 

 

 

 

ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಮತ್ತು ನಾಡಿನ ಸಮಸ್ತ ಜನತೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಮುಂದಿನ ಮೂರು ದಿನಗಳ ಅವಧಿಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಲಾಗಿದೆ. ಸಂಬಂಧಿಸಿದ ಎಲ್ಲರೂ ಸಹಕರಿಸುವಂತೆ ಕೋರಿದ್ದಾರೆ.

ಆನ್ ಲೈನ್ ತರಗತಿ ಆರಂಭಿಸಿ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

 

 

ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್‌ ಲೈನ್ ತರಗತಿ ಶುರು ಮಾಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ ಎಂದು ಹೇಳಿದ್ದಾರೆ.

ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ಕರ್ನಾಟಕದ ಬಿಜೆಪಿ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಎಂದು ಆರೋಪಿಸಿದ್ದಾರೆ.

ಹಿಜಾಬ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿಗಳು ಈಗಲಾದರೂ ಅರಿತುಕೊಂಡು ತಕ್ಷಣ ಮಧ್ಯಪ್ರವೇಶಿಸಿ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿ ತಕ್ಷಣ ಶುರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours