ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ,22 ಪ್ರಯಾಣಿಕರು?

 

ಕಾರವಾರ,ಡಿ.16 – ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದ್ದು ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯಲ್ಲಾಪುರ ಸಮೀಪದ ಜೋಡಕೆರೆ ಬಳಿ ಇಂದು ಮುಂಜಾನೆ ನಡೆದಿದೆ.
ಮುಂಬೈನಿಂದ ಮಂಗಳೂರು ಕಡೆ ರಾಷ್ಟೀಯ ಹೆದ್ದಾರಿ ೬೩ರ ಮೂಲಕ ಬಸ್ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಈ ಬಸ್ಸಿನಲ್ಲಿ ೨೨ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗಲಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಬೆಂಕಿ ನಂದಿಸಿದ್ದು ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours