ಹೊಳಲ್ಕೆರೆ ಬೀದಿ ಬದಿಯ ವ್ಯಾಪರಿಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ.

 

*ಹೊಳಲ್ಕೆರೆ ಪುರಸಭೆ ಹಾಗೂ ಸಾರ್ವಜನಿಕ ಆಸ್ಪತ್ರೆ ಹೊಳಲ್ಕೆರೆ ಇವರ ಸಂಯುಕ್ತಾಶ್ರಯದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ*

ಹೊಳಲ್ಕೆರೆ ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರ ನಡೆಸುವ, ಪುರಸಭೆಯಿಂದ ಅಧಿಕೃತವಾಗಿ ಗುರುತಿನ ಚೀಟಿ ಪಡೆದಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ ತಪಾಸಣೆ ನಡೆಸಿ ಕೋವಿಡ್ ಲಸಿಕೆ ಸಹ ನೀಡಲಾಗುತ್ತಿದ್ದು ಹೊಳಲ್ಕೆರೆ ಪುರಸಭೆಯಿಂದ ಗುರುತಿನ ಚೀಟಿ ಪಡೆದಿರುವ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೊಳಲ್ಕೆರೆ ಪುರಸಭೆ ಅಧ್ಯಕ್ಷರಾದ ಆರ್ ಎ ಅಶೋಕ್, ಉಪಾಧ್ಯಕ್ಷರಾದ ಕೆ.ಸಿ. ರಮೇಶ್ ಬೀದಿ ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪುರಸಭೆ ಹಾಗೂ ಸಾರ್ವಜನಿಕ ಆಸ್ಪತ್ರೆ ಹೊಳಲ್ಕೆರೆ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 28.05.2021ರಿಂದ ಬೀದಿ ವ್ಯಾಪಾರಸ್ಥರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಹೊಳಲ್ಕೆರೆ ಪುರಸಭೆಯಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ತೋರಿಸಿ, ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಬೀದಿ ವ್ಯಾಪಾರಸ್ಥರು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಗೌರವಾನ್ವಿತ ಪುರಸಭಾ ಸದಸ್ಯರುಗಳು, ಬೀದಿ ಬದಿ ವ್ಯಾಪಾರಸ್ಥರ ಸಂಘದ ಸದಸ್ಯರುಗಳು, ಹಾಗೂ ಸಾರ್ವಜನಿಕರು ಸಹ ಬೀದಿ ಬದಿ ವ್ಯಾಪಾರಸ್ಥರಿಗೆ ಮಾಹಿತಿ ನೀಡಿ ಕೋವಿಡ್ ಲಸಿಕೆ ಪಡೆದುಕೊಳ್ಳಲು ತಿಳಿಸುವಂತೆ ಮುಖ್ಯಾಧಿಕಾರಿ ಎ ವಾಸಿಂ ಕೋರಿದ್ದಾರೆ.

[t4b-ticker]

You May Also Like

More From Author

+ There are no comments

Add yours