ಒಂದೇ ದಿನ 104 ಜನಕ್ಕೆ ಕೋವಿಡ್ ಪಾಸಿಟಿವ್

 

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಆರ್ಭಟ  ಪ್ರಾರಂಭವಾಗಿದ್ದು ಇಂದು ಒಂದೇ ದಿನ  104 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರು ಒಂದರಲ್ಲಿ  ಒಟ್ಟು  85 ಜನರಿಗೆ ಕೋವಿಡ್  ( covid19) ಸೋಂಕು ದೃಢಪಟ್ಟಿದೆ.

ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ 8 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಕೇರಳದ ಗಡಿಯಲ್ಲಿ ಹೈ ಅಲರ್ಟ್

ಕೊರೊನಾ ರೂಪಾಂತರ ತಳಿ ಜೆಎನ್.1 ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ‘ಕೇರಳದ ಗಡಿಯಲ್ಲಿ ಎಚ್ಚರಿಕೆ ಕ್ರಮ ವಹಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸುತ್ತಿದ್ದು, ಕೆಮ್ಮು, ನೆಗಡಿ, ಜ್ವರ ಇರುವವರಿಗೆ ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. ಅಗತ್ಯ ಇದ್ದವರಿಗೆ ಆರ್.ಟಿ.ಪಿ.ಸಿ.ಆರ್ ತಪಾಸಣೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ CET ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಸಿದ್ಧತೆ

ಕೊರೊನಾ ಹಾಟ್​ಸ್ಪಾಟ್​ ಆಗುತ್ತಿರುವ ಬೆಂಗಳೂರಿನ ವಾಣಿ ವಿಲಾಸ, ವಿಕ್ಟೋರಿಯಾ, ಮಿಂಟೋ ಆಸ್ಪತ್ರೆಗಳಲ್ಲಿ ಈಗಾಗಲೇ ಕೊರೊನಾ ಮುನ್ನೇಚರಿಕೆ ಕ್ರಮವಾಗಿ ಸಿ‌ದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್​ ನಿರ್ಮಾಣ ಮಾಡಲಾಗಿದೆ. ಐಸಿಯುನಲ್ಲಿ 6 ಬೆಡ್​ಗಳನ್ನು ಇರಿಸಲಾಗಿದೆ. ಜೊತೆಗೆ ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್​​​ಗಳನ್ನು ಆಸ್ಪತ್ರೆ ಹೊಂದಿದೆ.

 

[t4b-ticker]

You May Also Like

More From Author

+ There are no comments

Add yours