ಹೊಳಲ್ಕೆರೆ ಹಾಸ್ಟೆಲ್ ನಲ್ಲಿ ಊಟ ಸೇವಿಸಿ13 ವಿದ್ಯಾರ್ಥಿಗಳು ಅಸ್ವಸ್ಥ

 

ಚಿತ್ರದುರ್ಗ- ಹಾಸ್ಟೆಲ್ ನಲ್ಲಿ ಊಟ ಸೇವಿಸಿ 13 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ BCM ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು ಪ್ರಾಣಪಾಯದಿಂದ ವಿಧ್ಯಾರ್ಥಿಗಳು ಪಾರಾಗಿದ್ದಾರೆ. ತಡರಾತ್ರಿ 9 ಗಂಟೆ ಸುಮಾರಿನಲ್ಲಿ 50 ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಊಟ ಸೇವಿಸಿದ್ದಾರೆ. ಬಳಿಕ 13 ಮಂದಿ ವಿಧ್ಯಾರ್ಥಿಗಳಿಗೆ ವಾಂತಿ- ಬೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥಗೊಂಡ ವಿಧ್ಯಾರ್ಥಿಗಳನ್ನ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಗಂಭೀರವಾಗಿದ್ದ ಇಬ್ಬರೂ ವಿಧ್ಯಾರ್ಥಿಗಳನ್ನ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ತಡರಾತ್ರಿ ಅನ್ನ ಸಾಂಬಾರ್ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[t4b-ticker]

You May Also Like

More From Author

+ There are no comments

Add yours