18 ವಿಶ್ವವಿದ್ಯಾಲಯ ನಿಲಯದಲ್ಲಿ 32 ಡಿಗ್ರಿ ಪಡೆದ ಮೊದಲಿಗರು ಅಂಬೇಡ್ಕರ್: ತಹಶೀಲ್ದಾರ್ ಎನ್.ರಘುಮೂರ್ತಿ

 

ಚಳ್ಳಕೆರೆ:  18 ವಿಶ್ವವಿದ್ಯಾಲಯ ನಿಲಯದಲ್ಲಿ 32 ಡಿಗ್ರಿ ಪಡೆದ ಮೊದಲಿಗರು ಎಂದರೆ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.

ಚಳ್ಳಕೆರೆ ತಾಲೂಕಿನ ಕಸವಿಗೊಂಡನಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ನೂತನ ಶಾಖೆಯನ್ನು ಉದ್ಘಾಟಿಸಿ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ 131ನೇ ಜಯಂತೋತ್ಸವ ಹಾಗೂ ಡಾಕ್ಟರ್ ಬಾಬು ಜಗಜೀವನ್ ರಾವ್ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.

ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.ಓದಬೇಕೆಂದು ನಿರ್ಧರಿಸಿ ಓದುವ ಆಸೆ ಹೆಚ್ಚಿಸಿಕೊಳ್ಳುತ್ತಾರೆ. ಸತಾರ ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ತರಗತಿಯಲ್ಲಿ ಓದುತ್ತಿರುವಾಗ ಮಹಾರ ಎಂಬ ಅಸ್ಪೃಶ್ಯರದವರೆಂಬ ಕಾರಣಕ್ಕಾಗಿ ಹೆಚ್ಚು ಕಡಿಮೆ ಎಲ್ಲ ಶಿಕ್ಷಕರು ಹಾಗೂ ಮೇಲ್ವರ್ಗದ ಮಕ್ಕಳು ಇವರನ್ನು ಅಸ್ಪೃಶ್ಯತೆಯಿಂದ ನೋಡುತ್ತಿದ್ದು ಅಲ್ಲಿಂದಲೇ ಇವರು ಗಟ್ಟಿಗಳ ಆಗಿ ಮುಂದೆ ಗಟ್ಟಿಗರ ಆಗುತ್ತಾರೆ ಇವರ ಪ್ರತಿಭೆ ಗುರುತಿಸಲಿಲ್ಲ.

ಆದರೆ ಅಲ್ಲಿನ ಶಿಕ್ಷಕರಲ್ಲಿ ಒಬ್ಬರಾದ ಫೆಂಡೆಸ್  ಅಂಬೇಡ್ಕರ್ ಎಂಬ ಶಿಕ್ಷಕರು ಈ ಬಾಲಕನ ಪ್ರತಿಭೆ,ಕಲಿಯುವ ಹಂಬಲ,ಸೂಕ್ಷ್ಮಬುದ್ಧಿಶಕ್ತಿಯನ್ನು ಗುರುತಿಸಿ ಇವರಿಗೆ ಪ್ರೋತ್ಸಾಹಿಸಿದರು. ಜಾತಿಯಲ್ಲಿ ಆ ಶಿಕ್ಷಕರು ಬ್ರಾಹ್ಮಣರಾಗಿದ್ದರೂ ಕೂಡ ತಾವು ಊಟಕ್ಕೆ ತಂದಿದ್ದ ಬುತ್ತಿಯಲ್ಲಿ ಭೀಮರಾವರಿಗೆ ಒಂದಿಷ್ಟು ಕೊಟ್ಟು ಪ್ರೀತಿಯಿಂದ ಊಟ ಮಾಡಿಸುತ್ತಿದ್ದರು.

ಪ್ರಾಥಮಿಕ ಶಿಕ್ಷಣ ಹಲವಾರು ನೋವು ಮತ್ತು ಅವಮಾನಗಳಿಂದ ಸಾತಾರದಲ್ಲಿ ಮುಗಿಸಿ, ಮಾಧ್ಯಮಿಕ ಶಿಕ್ಷಣಕ್ಕಾಗಿ ಬಾಂಬೆಯ ಸರಕಾರಿ ಪ್ರೌಢ ಶಾಲೆಯಾದ ಎಲಿಫಿನ್ ಸ್ಟನ್ ಹೈಸ್ಕೂಲಿಗೆ ಸೇರಲು ನಿರ್ಧರಿಸುತ್ತಾರೆ. ಸಾತರದಂತೆ, ಇವರಿಗೆ ಹೆಚ್ಚು ಶೋಷಣೆ ಅನ್ಯಾಯ ಚುಚ್ಚು ಮಾತು ಅಪಮರ್ಯಾದೆ ಇರಕ್ಕಿಲ್ಲ ಎಂಬ ಭಾವನೆಯೊಂದಿಗೆ ಬಾಂಬೆಗೆ ಹೋಗಿ ಕಾರ್ಮಿಕರ ಬಡಾವಣೆ ಎಂಬಲ್ಲಿ ಒಂದು ಕೋಣೆಯನ್ನು ಬಾಡಿಗೆಗೆ ಹಿಡಿದು ಶಾಲೆಗೆ ಸೇರಿಸುತ್ತಾರೆ. ಅಲ್ಲಿಯೂ ಸಹ ಭೀಮರಾವ್ ಅವರಿಗೆ ದಲಿತ ಎಂದು ಗೊತ್ತಾದ ಮೇಲೆ ಅವರು ಇದ್ದಂತಹ ಪುಸ್ತಕ ಬಟ್ಟೆಗಳನ್ನೆಲ್ಲ ತೆಗೆದು ಹೊರಹಾಕುತ್ತಾರೆ.  ಆ ಸಂದರ್ಭದಲ್ಲಿ ಇವರು ಸಾಕಷ್ಟು ನೋವನ್ನು ಅನುಭವಿಸುತ್ತಾರೆ ಹೀಗೆ ಎಲ್ಲ ನೋವನ್ನು ಅನುಭವಿಸಿ ಕೊನೆಗೆ 18 ವಿಶ್ವವಿದ್ಯಾಲಯದಲ್ಲಿ 32 ಪದವಿಗಳನ್ನು ಪಡೆಯುತ್ತಾರೆ ಇಂದು ಅವರು ಕೊಟ್ಟಂತಹ ಎಲ್ಲಾ ಹಕ್ಕುಗಳು ನಮಗೆ ಅನುಕೂಲವಾಗಿದೆ ಎಂದು ತಿಳಿಸಿದರು .ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕ ಅಧ್ಯಕ಼್ಷ ಟಿ. ವಿಜಯಕುಮಾರ್. ದಲಿತ ಸಂಘರ್ಷ ಸಮಿತಿಯ ಕಾರ್ಯದರ್ಶಿ ಉಮೇಶ್ ಚಂದ್ರ ಬ್ಯಾನರ್ಜಿ ಮಾತನಾಡಿದರು ಈ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದಕ್ಷ ವೆಂಕಟೇಶ್ವ ಗ್ರಾಮಪಂಚಾಯಿತಿ ಮಾಜಿ ಸದಸ್ಯ ನಾಗರಾಜ್,ಗ್ರಾಮ.ಪಂಚಾಯಿತಿ ಸದಸ್ಯ ವಿರೇಶ ಪಾಲಯ್ಯ, ತಿಪ್ಪೇಸ್ವಾಮಿ, ಉಖಂಡರಾದ ಚಲ್ಮೆಶ,ಮಲ್ಲೇಶ,ಓಬಳೇಶ ಮಂಜುನಾಥ,ಲಿಂಗರಾಜ್, ಮಹೇಶ ನನ್ನಿವಾಳ,ತಿಪ್ಪೇರುದ್ರಪ್ಪ, ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ದಲಿತ ಸಂಘರ್ಷ ಸಮಿತಿಯ ಮುಖಂಡರು ಗೆಳೆಯರ ಬಳಗದವರು ಇದ

[t4b-ticker]

You May Also Like

More From Author

+ There are no comments

Add yours