ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಗೆ 1900 ಕೋಟಿ ಮಂಜೂರು:ಎ.ನಾರಾಯಣಸ್ವಾಮಿ

 

ನೇರ ರೈಲು ಯೋಜನೆಗೆ ಟೆಂಡರ್:
ಚಿತ್ರದುರ್ಗ: ಈ ಭಾಗದ ಜನರ ಬಹುದಿನದ ಬೇಡಿಕೆಯಾದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಕೇಂದ್ರ ಸರ್ಕಾರ 1,900 ಕೋಟಿ ರೂ. ಮಂಜೂರು ಮಾಡಿದೆ  ಎಂದು  ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಹೇಳಿದರು.

ದಾವಣಗೆರೆ-ಚಿತ್ರದುರ್ಗ-ಹಿರಿಯೂರು ಭಾಗದಲ್ಲಿ ಈಗಾಗಲೇ ರೈಲ್ವೇ ಯೋಜನೆಗೆ ಅಗತ್ಯವಾದ ಶೇ.82 ರಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯೋಜನೆಯ ಟೆಂಡರ್ ಪ್ರಕ್ರಿಯೆ ಆರಂಭಿಸಲು ಶೇ.90 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರಬೇಕು. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಶೇ.8 ರಷ್ಟು ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ರೈಲ್ವೇ ಇಲಾಖೆಗೆ ನೀಡಲಾಗುವುದು. ಮುಂದಿನ ತಿಂಗಳ ವೇಳೆಗೆ ಯೋಜನೆ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳುವುದಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಭರವಸೆ ವ್ಯಕ್ತಪಡಿಸಿದರು.
ದಾವಣಗೆರೆ-ಭರಮಸಾಗರ ನಡುವಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಈ ಭಾಗದ ಯೋಜನೆಗೆ ಚಾಲನೆ ನೀಡಲಾಗಿದೆ. ಭರಮಸಾಗರ-ಚಿತ್ರದುರ್ಗ ನಡುವಿನ ಭೂ ಸ್ವಾಧೀನ ಪಕ್ರಿಯೆಯೂ ಮುಗಿಯುವ ಹಂತಕ್ಕೆ ಬಂದಿದ್ದು, ಭರಮಸಾಗರ-ಚಿತ್ರದುರ್ಗ ನಡುವಿನ ರೈಲ್ವೇ ಯೋಜನೆಯನ್ನು ಸಹ ಆದಷ್ಟು ಶೀಘ್ರ ಆರಂಭಿಸುವುದಾಗಿ  ತಿಳಿಸಿದರು.

ಚಿತ್ರದುರ್ಗ ರೈಲ್ವೇ ನಿಲ್ದಾಣವನ್ನು ನೇರ ರೈಲ್ವೇ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗುವುದು. ಈ ಹಿನ್ನಲೆಯಲ್ಲಿ ನೇರ ರೈಲ್ವೇ ಯೋಜನೆಯ ಕಾಮಗಾರಿಗೆ ಚ್ಯುತಿ ಹಾಗೂ ಅಡಚಣೆ ಉಂಟಾಗದಂತೆ ಅಮೃತ್ ಯೋಜನೆಯಡಿ ಆಡಳಿತ ಕಚೇರಿಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಯೋಜನಾ ವ್ಯವಸ್ಥಾಪಕ ಆನಂದ ಭಾರತಿ ಸಚಿವರಿಗೆ ತಿಳಿಸಿದರು.
ಸದ್ಯ ಚಿತ್ರದುರ್ಗ ರೈಲ್ವೇ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಾತ್ರ ಪ್ರಯಾಣಿಕ ರೈಲುಗಳು ಕಾರ್ಯಚರಣೆ ನಡೆಸುತ್ತಿವೆ. 2ನೇ ಫ್ಲಾಟ್ ಫಾರಂ ಇಲ್ಲದ ಕಾರಣ ಓವರ್ ಬ್ರಿಡ್ಜ್ ನಿರ್ಮಿಸಿಲ್ಲ. ಮೂರನೇ ರೈಲ್ವೇ ಹಳಿಯಲ್ಲಿ ಗೂಡ್ಸ್‍ರೈಲುಗಳು ಮಾತ್ರ ಕಾರ್ಯಚರಣೆ ನಡೆಸುತ್ತಿವೆ. ನೇರ ರೈಲ್ವೇ ಮಾರ್ಗ ಯೋಜನೆಯಲ್ಲಿ ಸಂಪೂರ್ಣವಾಗಿ ರೈಲ್ವೇ ನಿಲ್ದಾಣವನ್ನು ನಿರ್ಮಾಣ ಮಾಡಲಿದ್ದು, ಆ ಸಂದರ್ಭದಲ್ಲಿ ಎರಡು ಫ್ಲಾಟ್ ಫಾರಂಗಳನ್ನು ನಿರ್ಮಿಸಿ, ಪ್ರಯಾಣಿಕರ ಅನುಕೂಲಕ್ಕೆ ಓವರ್ ಬ್ರಿಡ್ಜ್ ಸೌಲಭ್ಯ ಕಲ್ಪಿಸಲಾಗುವುದು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದರು.
ಹಳೆಯ ಪಿ.ಬಿ. ರೋಡ್‍ನಲ್ಲಿ ರೈಲ್ವೇ ಗೇಟ್ ಬಳಿ ಬ್ರಿಡ್ಜ್ ನಿರ್ಮಿಸುವ ಕಾಮಗಾರಿಗೆ ಎನ್.ಓ.ಸಿ ನೀಡುವಂತೆ ರೈಲ್ವೇ ಅಧಿಕಾರಿಗಳು ಪತ್ರ ಬರೆದಿದ್ದು, ಶೀಘ್ರವೇ ಎನ್.ಓ.ಸಿ ನೀಡುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅವರಿಗೆ ಕರೆ ಮಾಡಿ ಸೂಚನೆ ನೀಡಿದರು..

ಇದನ್ನೂ: ಓದಲು ಪೋಷಕರ ಒತ್ತಡ | SSLC ವಿದ್ಯಾರ್ಥಿ ನೇಣಿಗೆ ಶರಣು

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆ ಉಪ ವ್ಯವಸ್ಥಾಪಕ ರಾಮಸುಬ್ಬಯ್ಯ, ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಲೋಹಿತಾಶ್ವ, ಬ್ರಿಡ್ಜ್ ಡೆಪ್ಯೂಟಿ ಇಂಜಿನಿಯರ್ ಉನ್ನೀಕೃಷ್ಣನ್, ಸಹಾಯಕ ವಿಭಾಗೀಯ ಅಭಿಯಂತರ ನಿತ್ಯಾನಂದ ಸ್ವಾಮಿ, ಟ್ರಾಪಿಕ್ ಇನ್ಸ್‍ಪೆಕ್ಟರ್ ಬಿ.ಹನುಮಂತು, ಸ್ಟೇಷನ್ ಸೂಪರಿಡೆಂಟ್ ಇ.ಮಂಜುನಾಥ್, ಆರ್‍ಪಿಎಫ್ ಎಸ್‍ಐ ಜಯಣ್ಣ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಸೇರಿದಂತೆ ರೈಲ್ವೇ ಇಲಾಖೆ ಸಿಬ್ಬಂದಿ ಇದ್ದರು.

[t4b-ticker]

You May Also Like

More From Author

+ There are no comments

Add yours