ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ21: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಮತ್ತು ಸಿಖ್) ಅರ್ಜಿ ಆಹ್ವಾನಿಸಲಾಗಿದೆ. 2022-23 ನೇ ಸಾಲಿನ ಪ್ರಥಮ ಪಿಯುಸಿ (ಪಿಸಿಎಂಬಿ ಮತ್ತು ಹೆಚ್ಇಬಿಎ) ದಾಖಲಾತಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಸೀಟುಗಳು ಮೀಸಲಾಗಿರುತ್ತವೆ. ಮತ್ತು ಶೇ.25ರಷ್ಟು ಸೀಟುಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಿರುತ್ತವೆ. ಆಸಕ್ತ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರಾಂಶುಪಾಲರ ಮೂಲಕ ಉಚಿತವಾಗಿ ಆನ್ಲೈನ್ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
[t4b-ticker]
+ There are no comments
Add yours