Breaking News

Thursday, March 28 2024

ನಾ ನಾಯಕಿ ಕಾರ್ಯಕ್ರಮದಲ್ಲಿ ಜನಸಾಗರ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ

 

 

 

ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ನಡೆದ ಕಾಂಗ್ರೆಸ್‌ನ ನಾ ನಾಯಕಿ ಸಮಾವೇಶವನ್ನು ಪ್ರಿಯಾಂಕಾ ವಾದ್ರಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ಮಹಿಳಾ ಅಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವೆ ಉಮಾಶ್ರೀ ಇದ್ದಾರೆ.

ಬೆಂಗಳೂರು, ಜ. ೧೬- ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿರುವ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್‌ನ ನಾರಿ ಶಕ್ತಿಯ ಅನಾವರಣವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಬಲೀಕರಣದ ಜತೆಗೆ ಆರ್ಥಿಕ ನೆರವನ್ನು ಒದಗಿಸುವ ಯೋಜನೆಯನ್ನು ಪ್ರಕಟಿಸಲಾಗಿದೆ.
ಈ ನಾ ನಾಯಕಿ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ವಾದ್ರಾ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಚುನಾವಣಾ ಪ್ರಚಾರಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ.ಬಜೆಟ್‌ನಲ್ಲಿ ಮಹಿಳೆಯರಿಗೆ ವಿಶೇಷ ಯೋಜನೆ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಹೇಳಿಕೆ ನೀಡಿದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಮಹಿಳೆಯರ ಮೇಲೆ ಕಣ್ಣಿಟ್ಟು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ೧೮ ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವತಿಯರಿಗೆ ಮಾಸಿಕ ೨ ಸಾವಿರ ರೂ. ಭತ್ಯೆ ನೀಡುವ ಯೋಜನೆಯ ಘೋಷಣೆಯನ್ನು ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲೇ ಮಾಡಲಾಗಿದೆ.
ಈ ಸಮಾವೇಶದಲ್ಲೇ ಮಹಿಳಾ ಕಲ್ಯಾಣಕ್ಕಾಗಿ ಕಾಂಗ್ರೆಸ್ ಜಾರಿಗೊಳಿಸಲಿರುವ ಭರವಸೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಹಿಳೆಯರಿಗೆ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಲಾಯಿತು.ಮುಂದಿನ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪ್ರಜಾಧ್ವನಿ ಹೆಸರಿನಲ್ಲಿ ಬಸ್ ಯಾತ್ರೆಯನ್ನು ನಡೆಸಿದ್ದು, ಮಹಿಳಾ ಕಾರ್ಯಕರ್ತರ ನಾ ನಾಯಕಿ ಸಮಾವೇಶದ ಮೂಲಕ ಕಾಂಗ್ರೆಸ್‌ನ ನಾರಿ ಶಕ್ತಿಯ ಪ್ರದರ್ಶನವೂ ಆಗಿದೆ.ಅರಮನೆ ಮೈದಾನದಲ್ಲಿ ನಡೆದಿರುವ ನಾ ನಾಯಕಿ ಸಮಾವೇಶವನ್ನು ಕಾಂಗ್ರೆಸ್‌ನ ಮಹಿಳಾ ಘಟಕ ಆಯೋಜಿಸಿದ್ದು, ವಿವಿಧ ಪಂಚಾಯ್ತಿಗಳು, ಸಹಕಾರಿ ಸಂಘಗಳಿಗೆ ಸ್ಪರ್ಧಿಸಿದ ಮಹಿಳೆಯರು, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಜತೆಗೆ ಪ್ರತಿ ಬೂತ್ ಅಥವಾ ಪಂಚಾಯ್ತಿಯಿಂದ ಮಹಿಳೆಯರು ಭಾಗಿಯಾಗಿದ್ದಾರೆ.ಈ ಬೃಹತ್ ಸಮಾವೇಶದಲ್ಲಿ ಪ್ರಿಯಾಂಕ ವಾದ್ರಾ ಅವರು ಭಾಗಿಯಾಗಿ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತುಂಬಿದ್ದಾರೆ.ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್‌ನ ಪ್ರಚಾರಕ್ಕೆ ಮತ್ತಷ್ಟು ಬಲ ತುಂಬಿರುವ ಪ್ರಿಯಾಂಕ ವಾದ್ರಾ ಅವರು, ದೇಶದಲ್ಲಿ ಕಾಂಗ್ರೆಸ್‌ನ ಶಕ್ತಿಯನ್ನು ಪುನರ್ ಸ್ಥಾಪಿಸಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಈ ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಮುಂದೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಯಾವೆಲ್ಲಾ ಕಾರ್ಯಕ್ರಮಗಳನ್ನು ರೂಪಿಸಲಿದೆ. ಮಹಿಳೆಯರ ಸಬಲೀಕರಣಕ್ಕೆ ಏನೆಲ್ಲಾ ಮಾಡಲಿದೆ ಎಂಬುದನ್ನು ಕಾರ್ಯಕರ್ತರಿಗೆ ಮನವರಿಕೆ ಮಾಡುವ ಕೆಲಸವೂ ಆಗಿದೆ.ಈ ಬೃಹತ್ ಸಮಾವೇಶ ಮಹಿಳಾ ಕಾರ್ಯಕರ್ತರಿಗಷ್ಟೇ ಸೀಮಿತವಾಗಿದ್ದು, ಕಾಂಗ್ರೆಸ್‌ನ ಪುರುಷ ಕಾರ್ಯಕರ್ತರಿಗೆ ಸಮಾವೇಶದಲ್ಲಿ ಭಾಗಿಯಾಗಲು ಅವಕಾಶ ನೀಡಿಲ್ಲ.ನಾ ನಾಯಕಿ ಸಮಾವೇಶದ ವೇದಿಕೆಯಲ್ಲಿ ಪ್ರಿಯಾಂಕ ವಾದ್ರಾ ಜತೆ ಎಲ್ಲ ಮಹಿಳಾ ನಾಯಕಿಯರು ಆಸೀನರಾಗಿದ್ದು, ರಾಜ್ಯದ ಪ್ರಮುಖ ನಾಯಕರುಗಳು ವೇದಿಕೆಯಲ್ಲಿ ಕುಳಿತುಕೊಳ್ಳದೆ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದರು.ಈ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರುಗಳಾದ ಸಿದ್ಧರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸೇರಿದಂತೆ ಕೆಲ ಪ್ರಮುಖ ನಾಯಕರುಗಳಷ್ಟೇ ಭಾಗಿಯಾಗಿದ್ದಾರೆ. ಸಮಾವೇಶದಲ್ಲಿ ಮಹಿಳಾ ನಾಯಕಿಯರು ಹಾಗೂ ಕಾರ್ಯಕರ್ತರದ್ದೆ ಕಾರುಬಾರು.
ಅದ್ಧೂರಿ ಸ್ವಾಗತ
ನಾ ನಾಯಕಿ ಸಮಾವೇಶದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ ವಾದ್ರಾ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ವಿಮಾನ ನಿಲ್ದಾಣದಿಂದ ಅರಮನೆ ಮೈದಾನದವರೆಗೂ ಒಂದು ರೀತಿ ಮೆರವಣಿಗೆ ರೀತಿಯಲ್ಲಿ ಪ್ರಿಯಾಂಕ ವಾದ್ರಾ ಅವರನ್ನು ಕರೆ ತರಲಾಯಿತು.ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕ ವಾದ್ರಾ ಅವರಿಗೆ ಸ್ವಾಗತ ಕೋರಿದ್ದು ರಸ್ತೆಯ ಎರಡೂ ಕಡೆ ವಾದ್ರಾ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ ಹಾಗೂ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಿದ್ದಾರೆ. ಈ ರಸ್ತೆಯಲ್ಲಿ ಕಾಂಗ್ರೆಸ್‌ನ ಧ್ವಜಗಳನ್ನು ನೆಡಲಾಗಿತ್ತು
ಅರಮನೆ ಮೈದಾನದಲ್ಲಿ ಜನ ಸಾಗರ
ನಾ ನಾಯಕಿ ಸಮಾವೇಶ ನಡೆದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಎಲ್ಲಿ ನೋಡಿದರೂ ಮಹಿಳಾ ಕಾರ್ಯಕರ್ತರೆ ಕಾಣ ಸಿಗುತಿತ್ತು.
ಈ ಸಮಾವೇಶಕ್ಕೆ ರಾಜ್ಯದ ಎಲ್ಲೆಡೆ ಸಾವಿರಾರು ಮಹಿಳಾ ಕಾರ್ಯಕರ್ತರು ಬಂದಿದ್ದು, ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ನ ಮಹಿಳಾ ನಾಯಕರು ಹಾಗೂ ಕಾರ್ಯಕರ್ತರೆ ತುಂಬಿ ಹೋಗಿತ್ತು. ಇಡೀ ಮೈದಾನ ಕಾಂಗ್ರೆಸ್‌ಮಯವಾಗಿತ್ತು.

[t4b-ticker]

You May Also Like

More From Author

+ There are no comments

Add yours

ಭರ್ಜರಿ ಉದ್ಯೋಗ:3673 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಡಿಕೆ ಬೆಲೆಯಲ್ಲಿ ಏರಿಕೆ ರೈತರಿಗೆ ಅಲ್ಪ ಖುಷಿ

[t4b-ticker]