ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹೊಸಂಗಡಿ, ಪ್ರಗತಿಬಂಧು ಸ್ವಸಹಾಯ ಜ್ಞಾನ ವಿಕಾಸ ಸಂಘಗಳ ಒಕ್ಕೂಟ ಹೊಸಂಗಡಿ ಇದರ ಆಶ್ರಯದಲ್ಲಿ ಊರವರ ಸಹಕಾರದೊಂದಿಗೆ ಪೆರಿಂಜೆ ಪಡ್ಡ್ಯಾರಬೆಟ್ಟದ ಶ್ರೀ ಸಂತೃಪ್ತಿ ಸಭಾಭವನದಲ್ಲಿ 23ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಆ.21 ರಂದು ವೇ.ಮೂ. ರಾಮದಾಸ ಅಸ್ರಣ್ಣರು ಮಾರೂರು ಖಂಡಿಗ ಇವರ ನೇತೃತ್ವದಲ್ಲಿ ಜರಗಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದ ಅನುವಂಶಿಕ ಆಡಳಿತದಾರರಾದ ಎ. ಜೀವಂಧರ ಕುಮಾರ್ ಅವರು ವಹಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಕಾಲೇಜು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ. ಮಧುಮಾಲ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಹರೀಶ್ ಆರ್.ಎಸ್., ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಪಿ. ಧರಣೇಂದ್ರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಆನಂದ ಬಂಗೇರ, ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಅಧ್ಯಕ್ಷೆ ಶ್ರೀಮತಿ ವೇದಾವತಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಯೋಜನೆಯ ವಲಯ ಮೇಲ್ವಿಚಾರಕರು, ಒಕ್ಕೂಟಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ.



