24 ರಿಂದ 26 ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ

 

ಚಿತ್ರದುರ್ಗ, ಡಿಸೆಂಬರ್20:
ಚಿತ್ರದುರ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಡಿಸೆಂಬರ್ 24 ರಿಂದ 26ರವರೆಗೆ ಚಿತ್ರದುರ್ಗ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ಡಿ.24ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಕ್ರೀಡಾಕೂಟ ಉದ್ಘಾಟಿಸುವರು. ಡಿ.26ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು. ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಎಸ್.ರವಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours