ಚಿತ್ರದುರ್ಗ ಜಿಲ್ಲೆಯಲ್ಲಿ 24 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು ಅಭ್ಯರ್ಥಿ ನೋಡಿ.

 

ಚಿತ್ರದುರ್ಗ: ಜಿಲ್ಲೆಯಲ್ಲಿ 24 ನಾಮಪತ್ರ ಸಲ್ಲಿಕೆ
ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.19: ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 19 ರಂದು 20 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಸ್.ತಿಪ್ಪೇಸ್ವಾಮಿ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಟಿ.ರಘುಮೂರ್ತಿ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳಾಗಿ ಬಿ.ಇ. ಜಗದೀಶ್ ಹಾಗೂ ಆಕರ್ಷ್ ಬಿ.ಜೆ, ಜಾತ್ಯಾತೀತ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಜಿ. ರಘು ಆಚಾರ್ ಎರಡು ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜಿ.ಹೆಚ್.ತಿಪ್ಪಾರೆಡ್ಡಿ, ಸ್ವಯಂ ಕೃಷಿ ಪಕ್ಷದ ಅಭ್ಯರ್ಥಿಯಾಗಿ ಅವಿನಾಶ್ ಸಿ.ಎಲ್,  ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ವೆಂಕಟೇಶ್ ನಾಯ್ಕ್ ಆರ್, ಪಕ್ಷೇತರ ಅಭ್ಯರ್ಥಿಗಳಾಗಿ ಟಿ.ಕೆ.ಬಸವರಾಜ್, ಎಂ.ಹೆಚ್.ಶಶಿಧರ್ ಹಾಗೂ ಗಣೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಹಿರಿಯೂರು  ವಿಧಾನಸಭಾ ಕ್ಷೇತ್ರದಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಹೆಚ್. ಮಹೇಶ್ ಎರಡು ನಾಮಪತ್ರ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುಧಾಕರ್ ಡಿ, ಪಕ್ಷೇತರ ಅಭ್ಯರ್ಥಿಯಾಗಿ ರಂಗಯ್ಯ ಎಸ್ ನಾಮಪತ್ರ ಸಲ್ಲಿಸಿದ್ದಾರೆ.
ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ಡಿ.ಶೇಖರ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಎಸ್.ಲಿಂಗಮೂರ್ತಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಮಹಂತೇಶ್.ಸಿ.ಯು, ಜಾತ್ಯಾತೀತ ಜನತಾ ದಳ ಪಕ್ಷದಿಂದ ಎಸ್.ಆರ್.ಇಂದ್ರಜಿತ್ ನಾಯ್ಕ್, ಭಾರತೀಯ ಜನತಾ ಪಕ್ಷದಿಂದ ಎಂ.ಚAದ್ರಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಜಯಪ್ಪ ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
[t4b-ticker]

You May Also Like

More From Author

+ There are no comments

Add yours