28ನೇ ರಾಜ್ಯಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರ ಮಟ್ಟಕ್ಕೆ ಯಳಗೋಡು ಶಾಲೆಯ ಬಿ.ರಶ್ಮಿ ಆಯ್ಕೆ

 

ಚಿತ್ರದುರ್ಗ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಇವರು ಇದೇ ತಿಂಗಳ 1 ಮತ್ತು 2 ರಂದು ಬೆಂಗಳೂರಿನ ರಾಜ್ಯ ವಿಜ್ಞಾನ ಪರಿಷತ್ತಿನ ಸಭಾಂಗಣದಲ್ಲಿ online ಮೂಲಕ ಹಮ್ಮಿಕೊಂಡಿದ್ದ 28 ನೇ ರಾಜ್ಯಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಜ್ಯದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೇಂದ್ರ ವಿಷಯವಾದ “ಸುಸ್ಥಿರ ಜೀವನಕ್ಕಾಗಿ ವಿಜ್ಞಾನ” ವಿಷಯದಡಿಯಲ್ಲಿ ನಮ್ಮ ಚಿತ್ರದುರ್ಗ ಜಿಲ್ಲೆಯ 10 ಯೋಜನೆಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದವು. ಅದರಲ್ಲಿ ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ B. ರಶ್ಮಿ “ಗೊಬ್ಬರ ಹಾಕುವ ಸರಳ ಯಂತ್ರ” ಯೋಜನೆಯನ್ನು online ನಲ್ಲಿ ಮಂಡಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಈ ಯೋಜನೆ ಮಂಡನೆಯಲ್ಲಿ ಶಾಲೆಯ ವಿಜ್ಞಾನ ಶಿಕ್ಷಕರಾದ C. G. ಹಾಲೇಶ್ ರವರು ಮಾರ್ಗದರ್ಶನ ನೀಡಿದ್ದರು. ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿನಿ ರಾಷ್ಟ್ಮಮಟ್ಟಕ್ಕೆ ಆಯ್ಕೆ ಆಗಿ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಮತ್ತು ಶಿಕ್ಷಕರನ್ನು ಕ.ರಾ.ವಿ.ಪ. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಎಸ್.ಟಿ.ಸ್ವಾಮಿ ಹಾಗೂ ಜಿಲ್ಲಾ ಮಕ್ಕಳ ವಿಜ್ಞಾನ ಸಮಾವೇಶ ಸಂಯೋಜಕರಾದ ಹೆಚ್.ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ಮಮಟ್ಟಕ್ಕೆ ಆಯ್ಕೆ ಆಗಿರುವ ರಾಜ್ಯದ 30 ಬಾಲವಿಜ್ಞಾನಿಗಳನ್ನು ಬೆಂಗಳೂರಿನಲ್ಲಿ ಇದೇ ತಿಂಗಳ 17 ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours