ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

 

ಬೆಂಗಳೂರು : ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಬಾರಿ ದ್ವಿತೀಯ ಪಿಯುಸಿ ಪರೀಸಖೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್​ಗಳಿಗೆ ಅವಕಾಶ ಇರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ 15 ನಿಮಿಷ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ವಿವರಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ

ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್

ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ

ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್.

ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ

ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ

ದಿನಾಂಕ 21-03-2023, ಮಂಗಳವಾರ – ಹಿಂದಿ

ದಿನಾಂಕ 23-03-2023, ಗುರುವಾರ – ಇಂಗ್ಲೀಷ್

ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

[t4b-ticker]

You May Also Like

More From Author

+ There are no comments

Add yours