ಜೂ 11 ಕ್ಕೆ ಪೆಟ್ರೋಲ್, ಡೀಸೆಲ್ ದರ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ.

 

ನವದೆಹಹಲಿ: ದೇಶದಲ್ಲಿ ನಿತ್ಯ ಬಳಕೆಯ ಮಾಡುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲು ತಿರ್ಮಾನಿಸಿದೆ. ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ಹೇಳಿದೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ಮೇ 4 ರಿಂದ ಇದುವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೇಂದ್ರ ಸರ್ಕಾರದ ಈ ತೈಲ ಬೆಲೆ ಏರಿಕೆ ಕುರಿತು ಮಾತನಾಡಿರುವ ಕೇಂದ್ರ ಪೆಟ್ರೋಲಿಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, “ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಕಚ್ಚಾತೈಲ ದರ ಹೆಚ್ಚಳವಾಗಿರುವುದೇ ಭಾರತದಲ್ಲಿ ತೈಲ ಬೆಲೆ ಏರಿಕೆಗೆ ಕಾರಣ” ಎಂದು ಹೇಳಿದ್ದಾರೆ.

“ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿರುವ ಕುರಿತು ಜಿಎಸ್‌ಟಿ ಮಂಡಳಿ ತೀರ್ಮಾನಿಸಬೇಕು. ಒಂದು ವೇಳೆ ಜಿಎಸ್‌ಟಿ ವ್ಯಾಪ್ತಿಗೆ ಬಂದರೆ ದರಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿವೆ” ಎಂದು ಸಚಿವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಗ್ರಾಹಕರಿಗೆ ಮಾತ್ರ ಎಲ್ಲಿ ಹೋದರು ಪೆಟ್ಟು ಬೀಳುತ್ತಿದೆ. ಕಳೆದ ಹಲವು ಸರ್ಕಾರಗಳಲ್ಲಿ ನಿತ್ಯ ದರ ಬದಲಾವಣೆ ಆಗುತ್ತಿರಲಿಲ್ಲ. ಮತ್ತು ಜನರಿಗೆ 2-3ತಿಂಗಳಿಗೊಮ್ಮೆ ಆದರೆ ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ ಕಡಿಮೆ ಮಾಡಲು ಸಾಕಷ್ಟು ಕ್ರಮ ವಹಿಸಿದೆ.ಈಗಿನ ಕೇಂದ್ರ ಸರ್ಕಾರ ಮಾತ್ರ ಕಣ್ಣಿದ್ದು ಕುರುಡಾದಂತೆ ವರ್ತಿಸುತ್ತಿದೆ.

[t4b-ticker]

You May Also Like

More From Author

+ There are no comments

Add yours