ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ರೂ. 57 ಕೋಟಿ ಅನುದಾನ

ಮಂಗಳೂರು: ಬೆಳ್ತಂಗಡಿ-ಮೂಡುಬಿದಿರೆ-ಮುಲ್ಕಿ ರಾಜ್ಯ ಹೆದ್ದಾರಿಯ ನವೀಕರಣಕ್ಕಾಗಿ ೫ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸಿಆರ್ಐಎಫ್ ಅಡಿ ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆಗಳನ್ನು ಸುಮಾರು 57 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 82..64 ಕಿ.ಮೀ ರಸ್ತೆಗಳನ್ನು ಒಳಗೊಂಡಿರಲಿವೆ ಎಂದು ಸಂಸದರು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಇದರಲ್ಲಿ ವೇಣೂರು-ಅಂಡಿಂಜೆ-ನಾರಾವಿ ಜಿಲ್ಲಾ ಮುಖ್ಯ ರಸ್ತೆಯ 10 ಕಿ.ಮೀ ವ್ಯಾಪ್ತಿಯ ಅಭಿವೃದ್ಧಿಗೆ ಅನುದಾನ ಇರಿಸಲಾಗಿದೆ.
ಈ ಯೋಜನೆಗಳು ಜಿಲ್ಲೆಯ ಪ್ರಮುಖ ಸಂಪರ್ಕ ಮಾರ್ಗಗಳನ್ನು ಬಲಪಡಿಸಲಿವೆ, ಸುಗಮ ಸಾರಿಗೆಗೆ ಅನುವು ಮಾಡಿಕೊಡಲಿವೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿವೆ ಎಂದು ಸಂಸದರು ಹೇಳಿದ್ದಾರೆ.
ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ನಂತರ, ಇವು ಜಿಲ್ಲೆಯ ಆರ್ಥಿಕತೆ, ಶೈಕ್ಷಣಿಕ ಚಟುವಟಿಕೆಗಳು ಮತ್ತು ಪ್ರವಾಸೋದ್ಯಮ ಕ್ಷೇತ್ರಕ್ಕೆ ಗಮನಾರ್ಹ ಉತ್ತೇಜನ ನೀಡುವ ನಿರೀಕ್ಷೆಯಿದೆ ಎಂದು ಸಂಸದರು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.



