ಕೇಂದ್ರ ಸರ್ಕಾರ ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ

 

ಕೇಂದ್ರ ಸರ್ಕಾರ ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ.

ರೈತ ಮುಖಂಡರು ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಅನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ಪ್ರತಿಭಟನೆ.

2020ನೇ ಸಾಲಿನ ಬೆಳೆವಿಮೆ ಪಾವತಿ ಮಾಡಿದ ರೈತರಿಗೆ ಬೆಳೆವಿಮೆಯನ್ನು ಮತ್ತು ನಷ್ಟ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ವರ್ಗಹಿಸುವಂತೆ ಒತ್ತಾಯ.

ಕೇಂದ್ರ ಸರ್ಕಾರ ಬಡವರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ರೈತರ ಕೃಷಿ ಪಂಪುಸೆಟ್ಟುಗಳಿಗೆ ವಿದ್ಯುತ್‌ ಅನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸುವುದು ಹಾಗೂ 2020ನೇ ಸಾಲಿನ ಬೆಳೆವಿಮೆ ಪಾವತಿ ಮಾಡಿದ ರೈತರಿಗೆ ಬೆಳೆವಿಮೆಯನ್ನು ಮತ್ತು ನಷ್ಟ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಒತ್ತಾಯಿಸಿ, ಕರ್ನಾಟಕ ರೈತ ಸಂಘ ಚಳ್ಳಕೆರೆ ವತಿಯಿಂದ ಕೆ ಪಿ ಭೂತಯ್ಯ ಅವರ ನೇತೃತ್ವದಲ್ಲಿ ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಟ ರಘುಮೂರ್ತಿ ಅವರು ಪಾಲ್ಗೊಂಡು, ರೈತರ ವಿರೋಧಿ ಕಾನೂನು ಹಾಗೂ ಕಾಯ್ದೆಗಳನ್ನು ಶೀಘ್ರವಾಗಿ ಹಿಮ್ಮಪಡೆಯುವಂತೆ ಪ್ರತಿಭಟನೆ ನಡೆಸಲಾಯಿತು.

ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಈ ಹೋರಾಟದಲ್ಲಿ ನೂರಾರು ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಪಾಲ್ಗೊಂಡು, ರೈತ ಹೋರಾಟಕ್ಕೆ ಬೆಂಬಲ ವ್ಯಕ್ತ ಪಡಿಸಿದರು.

[t4b-ticker]

You May Also Like

More From Author

+ There are no comments

Add yours